ದೀಕ್ಷಾ ಭೂಮಿ ಯಾತ್ರೆಗೆ ೩೮ ಯಾತ್ರಾರ್ಥಿಗಳ ಪ್ರಯಾಣ

| Published : Oct 06 2025, 01:00 AM IST

ಸಾರಾಂಶ

ಈ ಸಂದರ್ಭ ಮಾತನಾಡಿದ ಅವರು, ಬೇರೆ ಬೇರೆ ಧರ್ಮದವರು ವಿವಿಧ ಕ್ಷೇತ್ರಗಳಿಗೆ ಯಾತ್ರೆ ಮಾಡುವ ಮಾದರಿಯಲ್ಲಿಯೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳು ಪ್ರತಿ ವ? ಅಕ್ಟೋಬರ್ ತಿಂಗಳಲ್ಲಿ ನಾಗಪುರದಲ್ಲಿ ನಡೆಯುವ ದಮ್ಮ ಪ್ರವರ್ತನಾ ದಿನ ಕಾರ್ಯಕ್ರಮಕ್ಕೆ ದೀಕ್ಷಾ ಯಾತ್ರೆ ಕೈಗೊಳ್ಳುವುದು ವಾಡಿಕೆ. ಸಾಹೇಬ ಅಂಬೇಡ್ಕರ್ ಅವರ ಅನುಯಾಯಿಗಳನ್ನು ಪ್ರತಿ ವರ್ಷವೂ ದೀಕ್ಷಾಯಾತ್ರೆಗೆ ಕಳುಹಿಸಲಾಗುತ್ತಿದೆ. ಈ ವರ್ಷ ಚನ್ನರಾಯಪಟ್ಟಣ ತಾಲೂಕಿನಿಂದ ೩೮ ಹಾಗೂ ಹೊಳೆನರಸೀಪುರದಿಂದ ೫ ಅನುಯಾಯಿಗಳನ್ನು ನಾಗಪುರ ದೀಕ್ಷಾಯಾತ್ರೆಗೆ ಕಳುಹಿಸುತ್ತಿರುವುದಾಗಿ ಅವರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಬೌದ್ಧ ಧರ್ಮದ ದೀಕ್ಷೆ ಪಡೆದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿ ಯಾತ್ರೆಗೆ ತಾಲೂಕಿನಿಂದ ೩೮ ಯಾತ್ರಾರ್ಥಿಗಳು ಪ್ರಯಾಣ ಬೆಳೆಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ತಾಲ್ಲೂಕಿನ ವಿವಿಧ ಗ್ರಾಮಗಳ ೩೮ ಮಂದಿ ಯಾತ್ರಾರ್ಥಿಗಳು ಆರಂಭಿಸಿ ರುವ ಪ್ರಯಾಣದ ಬಸ್‌ಗೆ ಸ್‌ಗೆ ಮಂಗಳವಾರ ಶಾಸಕ ಬಾಲಕೃಷ್ಣ ತಾಲೂಕು ಕಚೇರಿ ಮುಂಭಾಗದಲ್ಲಿ ಪೂಜೆ ಸಲ್ಲಿಸಿ ಎಲ್ಲ ಯಾತ್ರಾರ್ಥಿಗಳಿಗೂ ಶುಭಕೋರಿದರು.

ಈ ಸಂದರ್ಭ ಮಾತನಾಡಿದ ಅವರು, ಬೇರೆ ಬೇರೆ ಧರ್ಮದವರು ವಿವಿಧ ಕ್ಷೇತ್ರಗಳಿಗೆ ಯಾತ್ರೆ ಮಾಡುವ ಮಾದರಿಯಲ್ಲಿಯೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳು ಪ್ರತಿ ವ? ಅಕ್ಟೋಬರ್ ತಿಂಗಳಲ್ಲಿ ನಾಗಪುರದಲ್ಲಿ ನಡೆಯುವ ದಮ್ಮ ಪ್ರವರ್ತನಾ ದಿನ ಕಾರ್ಯಕ್ರಮಕ್ಕೆ ದೀಕ್ಷಾ ಯಾತ್ರೆ ಕೈಗೊಳ್ಳುವುದು ವಾಡಿಕೆ. ದಮ್ಮ ಪ್ರವರ್ತನಾ ದಿನ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಾಹೇಬ ಅಂಬೇಡ್ಕರ್ ಅವರ ಅನುಯಾಯಿ ಗಳನ್ನು ಪ್ರತಿ ವರ್ಷವೂ ದೀಕ್ಷಾಯಾತ್ರೆಗೆ ಕಳುಹಿಸಲಾಗುತ್ತಿದೆ. ಈ ವರ್ಷ ಚನ್ನರಾಯಪಟ್ಟಣ ತಾಲೂಕಿನಿಂದ ೩೮ ಹಾಗೂ ಹೊಳೆನರಸೀಪುರದಿಂದ ೫ ಅನುಯಾಯಿಗಳನ್ನು ನಾಗಪುರ ದೀಕ್ಷಾಯಾತ್ರೆಗೆ ಕಳುಹಿಸುತ್ತಿರುವುದಾಗಿ ಅವರು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಸಹಾಯಕ ಡಿ.ಆರ್.ತ್ಯಾಗರಾಜ್, ಕಚೇರಿ ಅಧೀಕ್ಷಕ ಮೋಹನ್, ದಲಿತ ಮುಖಂಡರಾದ ಪ್ರಕಾಶ್ ವಿರುಪಾಕ್ಷಪುರ, ರಂಗಸ್ವಾಮಿ ಕಲ್ಕೆರೆ, ಯೋಗೀಶ್ ಗುರಿಗಾರನಹಳ್ಳಿ, ಸಿಆರ್‌ಪಿ ಮಲ್ಲೇಶ್, ಪುಟ್ಟಸೋಮಣ್ಣ, ಪರಮೇಶ್, ರಂಗಪ್ಪ, ನಾಗರಾಜು, ದೇವರಾಜ್, ಮಂಜಯ್ಯ, ಅಣ್ಣಮರಿ, ರಘು, ವಿ.ಆರ್‌. ಮಂಜಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.