ಭಾರತೀಯ ಸಂಸ್ಕೃತಿ, ಸಂಪ್ರದಾಯಗಳ ಪರಿಚಯದೊಂದಿಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸ್ನೇಹ, ಸೌಹಾರ್ದತೆ ಬೆಳೆಸುವ ಉದ್ದೇಶದಿಂದ ನಗರದ ಪೋದಾರ್ ಇಂಟರ್‌ನ್ಯಾಷನಲ್ ಶಾಲೆ ಮತ್ತು ಪೋದಾರ್‌ಪ್ರೆಪ್ ವತಿಯಿಂದ ನವರಾತ್ರಿ ದಾಂಡಿಯಾ ಉತ್ಸವ–2026 ಅನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಶಾಲಾ ಕುಟುಂಬದ ಸದಸ್ಯರ ನಡುವೆ ಸ್ನೇಹ, ಸೌಹಾರ್ದತೆ ಮತ್ತು ಪರಸ್ಪರ ಬಾಂಧವ್ಯವನ್ನು ವೃದ್ಧಿಸುತ್ತವೆ. ಶಿಕ್ಷಣದ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವ ಶಾಲೆಯ ಪ್ರಯತ್ನಕ್ಕೆ ಈ ಉತ್ಸವ ಸಾಕ್ಷಿಯಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಭಾರತೀಯ ಸಂಸ್ಕೃತಿ, ಸಂಪ್ರದಾಯಗಳ ಪರಿಚಯದೊಂದಿಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸ್ನೇಹ, ಸೌಹಾರ್ದತೆ ಬೆಳೆಸುವ ಉದ್ದೇಶದಿಂದ ನಗರದ ಪೋದಾರ್ ಇಂಟರ್‌ನ್ಯಾಷನಲ್ ಶಾಲೆ ಮತ್ತು ಪೋದಾರ್‌ಪ್ರೆಪ್ ವತಿಯಿಂದ ನವರಾತ್ರಿ ದಾಂಡಿಯಾ ಉತ್ಸವ–2026 ಅನ್ನು ಅದ್ಧೂರಿಯಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಡಾ. ಸರೋಜಿನಿ ಬಿ. ಅಂಗೋಲ್ಕರ್, ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದಾಂಡಿಯಾ ಉತ್ಸವ ಆಯೋಜಿಸಲಾಗಿದೆ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಶಾಲಾ ಕುಟುಂಬದ ಸದಸ್ಯರ ನಡುವೆ ಸ್ನೇಹ, ಸೌಹಾರ್ದತೆ ಮತ್ತು ಪರಸ್ಪರ ಬಾಂಧವ್ಯವನ್ನು ವೃದ್ಧಿಸುತ್ತವೆ. ಶಿಕ್ಷಣದ ಜತೆಗೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವ ಶಾಲೆಯ ಪ್ರಯತ್ನಕ್ಕೆ ಈ ಉತ್ಸವ ಸಾಕ್ಷಿಯಾಗಿದೆ ಎಂದರು.ಕಾರ್ಯಕ್ರಮದಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯೆ ಡಾ. ಎಚ್.ಪಿ. ರಂಜನಿ, ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಶ್ವೇತಾ ಮೋಹನ್, ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯ ಪ್ರವರ್ತಕಿ ಚೈತ್ರಾ ಶಿವಕುಮಾರ್ ಹಾಗೂ ವಾಸವಿ ಮಹಿಳಾ ಮಂಡಳಿ ಅಧ್ಯಕ್ಷೆ ಸುಷ್ಮಾ ವೆಂಕಟೇಶ್ ವಿಶೇಷ ಅತಿಥಿಗಳಾಗಿ ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಸಾಂಪ್ರದಾಯಿಕ ಉಡುಗೆ ತೊಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಂಗೀತದ ಲಯಕ್ಕೆ ತಕ್ಕಂತೆ ದಾಂಡಿಯಾ ನೃತ್ಯ ಪ್ರದರ್ಶಿಸುವ ಮೂಲಕ ಸಂಭ್ರಮಿಸಿದರು. ಪೋಷಕರಿಗಾಗಿ ಆಯೋಜಿಸಿದ್ದ ತೋರಣ ತಯಾರಿಕೆ ಮತ್ತು ರಂಗೋಲಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.