ಪಟ್ಟಣ ಸಹಿತ ಸುತ್ತಲಿನ ಪ್ರದೇಶದಲ್ಲಿ ಮಲಯಾಳಿಗರ ಪ್ರಧಾನ ಹಬ್ಬವಾದ ತಿರು ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಹೊಸ ಉಡುಗೆ ತೊಟ್ಟ ಮಹಿಳೆಯರು, ಮಕ್ಕಳು ಒಟ್ಟಿಗೆ ಸೇರಿ ತಮ್ಮ ಮನೆಯಂಗಳದಲ್ಲಿ ಓಣಂ ವೈಶಿಷ್ಟ್ಯವಾದ ಹೂವಿನ ರಂಗೋಲಿ ಬಿಡಿಸಿದ್ದು ಗಮನ ಸೆಳೆಯಿತು.

ಕನ್ನಡಪ್ರಭ ವಾರ್ತೆ ಸೊರಬ

ಮನೆಯಂಗಳ ಸಿಂಗರಿಸಿದ ಮಹಿಳೆಯರು ಕೇರಳದ ಸಂಸ್ಕೃತಿ ಪ್ರತಿಬಿಂಬಿಸುವ ಸಾಂಪ್ರದಾಯಿಕ ಸೀರೆ ಧರಿಸಿ ಹೂವಿನ ರಂಗೋಲಿಗೆ ದೀಪ ಬೆಳಗಿದರು. ನಂತರ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಹಬ್ಬಕ್ಕಾಗಿ ತಯಾರಿಸಿದ್ದ ವಿಶೇಷ ಭೋಜನವನ್ನು ಎಲ್ಲರೂ ಸವಿದರು. ಓಣಂ ಸಂದರ್ಭ ಕೃಷಿಕರ ಮೊದಲ ಬೆಳೆ ಕೊಯ್ಲಿಗೆ ಸಿದ್ಧವಾಗುತ್ತದೆ. ಕೃಷಿಗೆ ಸಂಬಂಧಿಸಿದಂತೆ ಮೊದಲ ಬೆಳೆಯ ಸಂಭ್ರಮದ ಹಬ್ಬವೂ ಇದಾಗಿದೆ. ಮಹಾದಾನಿ ಮಹಾಬಲಿ ಚಕ್ರವರ್ತಿ ವರ್ಷಕ್ಕೊಮ್ಮೆ ಸಿಂಹ ಮಾಸದ ಶ್ರಾವಣ ನಕ್ಷತ್ರದಂದು ಭೂಲೋಕಕ್ಕೆ ಬರುತ್ತಾನೆ ಎಂಬ ನಂಬಿಕೆ ಕೇರಳಿಗರಲ್ಲಿ ಇದೆ. ಈ ಕಾರಣದಿಂದಲೂ ಹಬ್ಬ ಪ್ರಾಮುಖ್ಯತೆ ಪಡೆದಿದೆ.