ನವೀಕೃತ ಪೆರ್ಣಂಕಿಲ ದೇವಸ್ಥಾನಕ್ಕೆ ಜೆಪಿ ಹೆಗ್ಡೆ ಭೇಟಿ

| Published : Mar 30 2024, 12:53 AM IST

ನವೀಕೃತ ಪೆರ್ಣಂಕಿಲ ದೇವಸ್ಥಾನಕ್ಕೆ ಜೆಪಿ ಹೆಗ್ಡೆ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ದೇವಾಲಯದ ಆಡಳಿತದಾರರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದು, ಇಂತಹ ಪುರಾತನ ದೇವಾಲಯದ ಜೀರ್ಣೋದ್ಧಾರ ಕಾರ್ಯದ ಅಂದದ ಸ್ವರೂಪ ಕಂಡು ಹರ್ಷ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಪೆರ್ಣಂಕಿಲ ಗ್ರಾಮದ ಸಂಪೂರ್ಣ ಜೀರ್ಣೋದ್ಧಾರಗೊಂಡ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವ ಕ್ರಾಯಕ್ರಮದ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ನಂತರ ದೇವಾಲಯದ ಆಡಳಿತದಾರರಾದ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದು, ಇಂತಹ ಪುರಾತನ ದೇವಾಲಯದ ಜೀರ್ಣೋದ್ಧಾರ ಕಾರ್ಯದ ಅಂದದ ಸ್ವರೂಪ ಕಂಡು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂತೋಷ್ ಕುಲಾಲ್, ನಾಯಕರಾದ ಕೃಷ್ಣಮೂರ್ತಿ ಆಚಾರ್ಯ, ಸೌರಭ್ ಬಲ್ಲಾಳ್, ಶರತ್ ಶೆಟ್ಟಿ, ಯತೀಶ್ ಕರ್ಕೇರ, ನವೀನ್ ಸಾಲ್ಯಾನ್, ಸತೀಶ್ ಕುಮಾರ್ ಮಂಚಿ, ಗುರುದಾಸ್ ಭಂಡಾರಿ, ಲಕ್ಷ್ಮೀನಾರಾಯಣ ಪ್ರಭು, ಸುಧೀರ್ ನಾಯಕ್, ಪ್ರಕಾಶ್ ಶೆಟ್ಟಿ, ದಿನೇಶ್ ಪೂಜಾರಿ, ಉದಯ್ ಕುಲಾಲ್, ಸಹನಾ ಕಾಮತ್, ಸಂಧ್ಯಾ ತಿಲಕ್‌ರಾಜ್, ಅರ್ಚನಾ ದೇವಾಡಿಗ, ಸೂರಜ್, ದೇವಸ್ಥಾನದ ಸ್ವಯಂಸೇವಕರಾದ ಮಹೇಶ್ ಕುಲಕರ್ಣಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

--------------

ಜೆಪಿ ಹೆಗ್ಡೆ ಮೇಲೆ ನೀತಿ ಸಂಹಿತೆ ಉಲ್ಲಂಘನೆ ದೂರು

ಕನ್ನಡಪ್ರಭ ವಾರ್ತೆ ಉಡುಪಿಉಡುಪಿ-ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾ.26ರಂದು ರಾತ್ರಿ ಶಿರ್ವ ಜಾರಂದಾಯ ದೈವಸ್ಥಾನದ ಜಾತ್ರೆಯ ಸಂದರ್ಭದಲ್ಲಿ ಭೇಟಿ ನೀಡಿದ ಜೆ.ಪಿ. ಹೆಗ್ಡೆ ಅವರು ತಡರಾತ್ರಿಯವರೆಗೂ ದೈವಸ್ಥಾನದ ಆಡಳಿತ ಮಂಡಳಿಯ ಜೊತೆ ಸಭೆ ನಡೆಸಿದ್ದಾರೆ ಎಂದು ಚುನಾವಣಾ ಪರಿವೀಕ್ಷಣಾ ತಂಡಕ್ಕೆ ದೂರು ಬಂದಿತ್ತು.ರಾತ್ರಿ 11.30 ಗಂಟೆಗೆ ಅಧಿಕಾರಿ ವಿನ್ಸೆಂಟ್ ವಿನೋದ್ ಡಿಸೋಜ ಸ್ಥಳಕ್ಕೆ ಭೇಟಿ ನೀಡಿದಾಗ, ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಭೆ ನಡೆಸಿ ಸಾರ್ವಜನಿಕರ ಮೇಲೆ ಪ್ರಭಾವ ಬೀರಿರುವುದು ಪತ್ತೆಯಾಗಿದ್ದು, ಅವರು ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.