ಕುಡಿಯುವ ನೀರಿಗೆ ಕೊರತೆ ಆಗದಂತೆ ನೋಡಿಕೊಳ್ಳಿ

| Published : Feb 08 2024, 01:34 AM IST

ಸಾರಾಂಶ

ಹದಿನೈದನೇ ಹಣಕಾಸು ಆಯೋಗದ ಅನುದಾನ, ರಾಜ್ಯ, ಕೇಂದ್ರಸರ್ಕಾರದಿಂದ ಬರುವ ಅನುದಾನವನ್ನು ಬಳಸಿಕೊಂಡು ಮೊದಲು ಕುಡಿಯುವ ನೀರಿಗೆ ಆದ್ಯತೆ ಕೊಡಬೇಕು. ಬರಗಾಲ ನಿರ್ವಹಣೆಯೇ ಮೊದಲ ಆದ್ಯತೆಯ ಕೆಲಸ ಆಗಬೇಕು ಎಂದು ಅವರು ಹೇಳಿದರು. ಶಾಲೆಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಲು ಶಿಕ್ಷಕರು ಆದ್ಯತೆ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಪೌಂಡ್, ಆಟದ ಮೈದಾನ ಹಾಗೂ ಸ್ಮಶಾನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಆಶ್ರಯ ಯೋಜನೆಗೆ ಸಂಬಂಧಿಸಿದಂತೆ ಆಯಾ ಗ್ರಾಮಗಳಲ್ಲೇ ಸರ್ಕಾರಿ ಜಾಗವನ್ನು ಕೂಡಲೇ ಗುರುತಿಸಬೇಕು’

- ಅಧಿಕಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡ ಸೂಚನೆ ಕನ್ನಡಪ್ರಭ ವಾರ್ತೆ ಮೈಸೂರು

ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕಟ್ಟೆಚ್ಚರ ವಹಿಸಬೇಕು. ಜನ-ಜಾನುವಾರುಗಳಿಗೆ ನೀರು,ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಪಂ ಸಭಾಂಗಣದಲ್ಲಿ ಬುಧವಾರ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುವ ನಗರಸಭೆ,ಪಟ್ಟಣ ಪಂಚಾಯಿತಿ,ಗ್ರಾಪಂ ಅಧಿಕಾರಿಗಳ, ವಿ.ಎ.ಸರ್ವೆಯರ್ ಗಳ ಸಭೆ ನಡೆಸಿದ ಅವರು, ಅಧಿಕಾರಿಗಳು ಐದಾರು ತಿಂಗಳ ಕಾಲ ಹಳ್ಳಿಗಳಿಗೆ ತಪ್ಪದೆ ಭೇಟಿ ನೀಡಿ ಪರಿಸ್ಥಿತಿ ಅರಿತು ಕೆಲಸ ಮಾಡಬೇಕು ಎಂದರು.

ನರೇಗಾ, ಹದಿನೈದನೇ ಹಣಕಾಸು ಆಯೋಗದ ಅನುದಾನ, ರಾಜ್ಯ, ಕೇಂದ್ರ ಸರ್ಕಾರದಿಂದ ಬರುವ ಅನುದಾನವನ್ನು ಬಳಸಿಕೊಂಡು ಮೊದಲು ಕುಡಿಯುವ ನೀರಿಗೆ ಆದ್ಯತೆ ಕೊಡಬೇಕು. ಬರಗಾಲ ನಿರ್ವಹಣೆಯೇ ಮೊದಲ ಆದ್ಯತೆಯ ಕೆಲಸ ಆಗಬೇಕು ಎಂದು ಅವರು ಹೇಳಿದರು.

ಶಾಲೆಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಲು ಶಿಕ್ಷಕರು ಆದ್ಯತೆ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆ ಪೌಂಡ್, ಆಟದ ಮೈದಾನ ಹಾಗೂ ಸ್ಮಶಾನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಆಶ್ರಯ ಯೋಜನೆಗೆ ಸಂಬಂಧಿಸಿದಂತೆ ಆಯಾ ಗ್ರಾಮಗಳಲ್ಲೇ ಸರ್ಕಾರಿ ಜಾಗವನ್ನು ಕೂಡಲೇ ಗುರುತಿಸಬೇಕು’ ಎಂದು ಅವರು ಸೂಚಿಸಿದರು.

ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ವಾಣಕ್ಕೆ ಅಗತ್ಯ ಇರುವ ನಿವೇಶನ ಮಂಜೂರಾತಿಗೆ ಪ್ರಸ್ತಾಪ ಸಲ್ಲಿಸಬೇಕು. ಅಧಿವೇಶನದ ವೇಳೆ ಸಚಿವರನ್ನು ಭೇಟಿ ವಾಡಿ ಮಂಜೂರು ವಾಡಿಸುವ ಜತೆಗೆ ಕಟ್ಟಡ ನಿರ್ವಾಣಕ್ಕೆ ಬೇಕಾದ ಅನುದಾನವನ್ನು ಬಿಡುಗಡೆ ವಾಡಿಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಅವರು ಹೇಳಿದರು.

ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಕಟ್ಟಡ ನಿರ್ಮಾಣ,ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸುವುದು ಅಗತ್ಯ ಇರುವ ಕಾರಣ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ರು ಬಿಆರ್ ಸಿಗಳ ಸಭೆ ನಡೆಸಿ ವಾಹಿತಿ ಪಡೆಯಬೇಕು. ಹೆಚ್ಚುವರಿ ಕೊಠಡಿಗಳ ನಿರ್ವಾಣಕ್ಕೆ ಬೇಕಾದ ಅನುದಾನ ಸಮೇತ ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಬೇಕು ಎಂದು ತಾಪಂ ಇಒಗೆ ಸಲಹೆ ನೀಡಿದರು.

ಕಚೇರಿಯಲ್ಲಿ ಕೂರದೆ ಹಳ್ಳಿಗಳಿಗೆ ತೆರಳಿ ಸಾರ್ವಜನಿಕರ ಕೆಲಸ ಕಾರ್ಯ ಮಾಡಿಕೊಡಬೇಕು. ಪೌತಿ ಖಾತೆ ಅಭಿಯಾನದಡಿ ಎಲ್ಲರಿಗೂ ಖಾತೆ ಮಾಡಿಕೊಡಬೇಕು. ಸರ್ಕಾರಿ ಭೂಮಿಯನ್ನು ಗುರುತಿಸಿ ಸಂರಕ್ಷಿಸಬೇಕು. ಸ್ಮಶಾನಕ್ಕೆ ಭೂಮಿಯನ್ನು ಹಸ್ತಾಂತರ ಮಾಡಿ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಬರೀ ಕಸದ ಡಬ್ಬಗಳನ್ನು ಕೊಟ್ಟು ಕೂರುವ ಬದಲಿಗೆ ನಾಗರಿಕರಲ್ಲಿ ಅರಿವು ಮೂಡಿಸಬೇಕು ಎಂದರು.

ಮೈಸೂರು ತಾಪಂ ಆಡಳಿತಾಧಿಕಾರಿ ಸವಿತಾ, ತಹಸಿಲ್ದಾರ್ ಮಹೇಶ್, ಇಒ ಗಿರಿಧರ್,ಎಡಿಎಲ್ಆರ್ ಚಿಕ್ಕಣ್ಣ ಇದ್ದರು.