ಸಾರಾಂಶ
ಸುರಪುರ ನಗರದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾಧಿಕಾರಿ ಕಾವ್ಯರಾಣಿ ಕೆ.ವಿ. ಮಾತನಾಡಿದರು.
ಕನ್ನಡಪ್ರಭ ವಾರ್ತೆ ಸುರಪುರ
ಸುರಪುರ ವಿಧಾನಸಭಾ ಎಸ್‌ಟಿ ಮೀಸಲು ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಯಾದಗಿರಿಯ ಸರಕಾರಿ ಪದವಿ ಕಾಲೇಜಿನಲ್ಲಿ ಜೂ.4 ರಂದು ಬೆಳಗ್ಗೆ 8 ರಿಂದ ಆರಂಭವಾಗಲಿದೆ ಎಂದು ಚುನಾವಣಾಧಿಕಾರಿ ಕಾವ್ಯರಾಣಿ ಕೆ.ವಿ. ಹೇಳಿದರು.ನಗರದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರಪುರ ಮತಕ್ಷೇತ್ರದಲ್ಲಿ 2.83 ಲಕ್ಷ ಮತದಾರರಿದ್ದು, 2.15 ಲಕ್ಷ ಮತದಾರರು ಮತದಾನ ಮಾಡಿದ್ದು, ಶೇ.76.04 ರಷ್ಟು ಮತದಾನವಾಗಿದೆ. ಮತ ಎಣಿಕೆಗೆ ಬೇಕಾದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.
317 ಮತಗಟ್ಟೆಗಳ ಇವಿಎಂ ಯಂತ್ರಗಳಿದ್ದು, 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಆರ್‌ಒ ನೇತೃತ್ವದಲ್ಲೇ 23 ರೌಂಡ್ ಟೇಬಲ್‌ನಲ್ಲಿ ಮತ ಎಣಿಕೆ ನಡೆಯಲಿದೆ. ಮೊದಲಿಗೆ ಪೋಸ್ಟಲ್ ಬ್ಯಾಲೆಟ್ ಎಣಿಕೆಯಿಂದ ಆರಂಭವಾಗಲಿದೆ. 500 ಪೋಸ್ಟಲ್ ಬ್ಯಾಲೆಟ್‌ಗೆ ಒಂದರಂತೆ ಮೂರು ಟೇಬಲ್ ವ್ಯವಸ್ಥೆ ಮಾಡಲಾಗಿದೆ. 1,311 ಪೋಸ್ಟಲ್ ಬ್ಯಾಲೆಟ್‌ನಿಂದ ಮತದಾನವಾಗಿದೆ ಎಂದು ತಿಳಿಸಿದರು.ಮತ ಎಣಿಕೆಯಲ್ಲಿ ಪಾಲ್ಗೊಳ್ಳುವರು ಮೂರು ದಿನ ಮುಂಚೆಯೇ ಪಾಸ್ ಪಡೆದುಕೊಳ್ಳಬೇಕು. ಈ ಕುರಿತು ಈಗಾಗಲೇ ರಾಜಕೀಯ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿ ಮನವರಿಕೆ ಮಾಡಲಾಗಿದೆ. ಭಾರತೀಯ ಚುನಾವಣೆ ನೀತಿ ಸಂಹಿತೆಯ ಅನುಸಾರ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.
ಯಾದಗಿರಿ ಹಾಗೂ ಸುರಪುರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ವಿಧಾನ ಪರಿಷತ್ ಚುನಾವಣೆಯು ನಡೆಯುತ್ತಿದೆ. ಇದರಿಂದಾಗಿ ಯಾವುದೇ ಮೆರವಣಿಗೆ, ಅತಿರೇಕವಾಗಿ ವರ್ತಿಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.ಸಭೆಯಲ್ಲಿ ನಗರಸಭೆ ಆಯುಕ್ತ, ಮತ ಎಣಿಕೆ ಕೇಂದ್ರದ ಸಹಾಯಕ ಅಧಿಕಾರಿ ಜಗನ್ನಾಥ ರೆಡ್ಡಿ, ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನಾಯ್ಕೊಡಿ, ಸುರಪುರ ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))