ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುವಿದ್ಯಾರ್ಥಿಗಳು ಭವಿಷ್ಯದಲ್ಲಿ ಸವಾಲುಗಳನ್ನು ಎದುರಿಸಲು ನಾಯಕತ್ವದ ಗುಣ ಅತಿ ಅವಶ್ಯಕ ಎಂದು ಮೈಸೂರು ವಿಶ್ವವಿದ್ಯಾನಿಲಯದ ಐಕ್ಯೂಎಸಿಯ ಸಮನ್ವಯ ಅಧಿಕಾರಿ ಡಾ.ಜೆ. ಲೋಹಿತ್ ಹೇಳಿದರು.ನಗರದ ಮೇಟಗಳ್ಳಿಯ ಜೆಎಸ್‌ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದ ಅವರು, ಇಂತಹ ಗುಣಗಳನ್ನು ಬೆಳೆಸುವಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿ ಸಂಘದ ಪಾತ್ರ ಅತಿ ದೊಡ್ದದಾಗಿರುತ್ತದೆ ಎಂದು ಮನೋಜ್ಞವಾಗಿ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಜೆಎಸ್‌ಎಸ್‌ಮಹಾವಿದ್ಯಾಪೀಠದ ದ ಶಾಲಾ ಶಿಕ್ಷಣ ವಿಭಾಗದ ಜಂಟಿ ನಿರ್ದೇಶಕ ಎಂ. ಶಿವಮಾದಪ್ಪ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚುಟುವಟಿಕೆಗಳಲ್ಲಿಯು ತೊಡಗಿಸಿಕೊಂಡು ತಮ್ಮ ವಿದ್ಯಾರ್ಥಿ ಜೀವನವನ್ನು ಹಸನುಗೊಳಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು. ಕಷ್ಟಕಾಲದಲ್ಲಿ ಯಾರೂ ಆಗುವುದಿಲ್ಲ. ನಮಗೆ ನಾವೇ ಆಗಬೇಕು ಎಂಬ ಮೌಲ್ಯಯುತ ನುಡಿಯನ್ನು ಹೇಳಿದರು.ವಿದ್ಯಾರ್ಥಿ ಸಂಘದ ಚುನಾಯಿತ ಸದಸ್ಯರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಲಾ ಮುಖ್ಯೋಪಾಧ್ಯಾಯ ಎನ್.ಪಿ. ಸತೀಶ್, ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಎನ್. ದೀಪಾ, ಸಹ ಕಾರ್ಯದರ್ಶಿ ಬಿ.ಆರ್. ಸುನೇಶ್‌ಕುಮಾರ್ ಇದ್ದರು.ಶಾಲೆಯ ಎಲ್ಲ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. 8ನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. 10ನೇ ತರಗತಿ ವಿದ್ಯಾರ್ಥಿಗಳಾದ ಎಸ್. ಸಿಂಚನ ಸ್ವಾಗತಿಸಿದರು. ಎ.ಎಸ್. ರಕ್ಷಿತಾಗೌಡ ನಿರೂಪಿಸಿದರು. ಎಚ್.ಸಿ. ಧಾರಿಣಿ ವಂದಿಸಿದರು.