ಕನ್ನಡಪ್ರಭ ವಾರ್ತೆ ಮೈಸೂರುಜ್ಞಾನವನ್ನು ಕೌಶಲ್ಯಗಳಾಗಿ ಪರಿವರ್ತಿಸಬೇಕು ಎಂದು ಮೈಸೂರು ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಎ.ಎನ್. ಸಂತೋಷ್ ಕುಮಾರ್ ಅಭಿಪ್ರಾಯಪಟ್ಟರು.ನಗರದ ಸರಸ್ವತಿಪುರಂನ ಜೆ.ಎಸ್.ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗಣಕ ವಿಜ್ಞಾನ ವಿಭಾಗದ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಪ್ರವಿಧಿ 2026 ಫೆಸ್ಟ್ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.ಕೌಶಲ್ಯಗಳಿಲ್ಲದ ಪದವಿಗಳು ಪ್ರಯೋಜನಕ್ಕೆ ಬರುವುದಿಲ್ಲ. ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವ ಅಗತ್ಯತೆ ಹೆಚ್ಚಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೊಂದಿಕೊಳ್ಳದವರು ಹಿಂದುಳಿದುಬಿಡುತ್ತಾರೆ. ತಂತ್ರಜ್ಞಾನವನ್ನು ಇತರರಿಗೆ ಸಹಾಯ ಮಾಡಲು ಬಳಸಬೇಕು ಮತ್ತು ದುರುಪಯೋಗ ಮಾಡಬಾರದು. ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವ ಮತ್ತು ಆಕರ್ಷಕ ವ್ಯಕ್ತಿತ್ವವನ್ನು ಬೆಳೆಸಿಕೊಂಡರೆ ಜೀವನದಲ್ಲಿ ಯಶಸ್ವಿಯಾಗಬಹುದು ಎಂದು ಅವರು ಸಲಹೆ ನೀಡಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೈಸೂರು ವಿವಿ ಕುಲಸಚಿವ ಪ್ರೊ.ಎನ್. ನಾಗರಾಜ್‌ಮಾತನಾಡಿ, ಫೆಸ್ಟ್‌ಗಳು ವಿದ್ಯಾರ್ಥಿಗಳಿಗೆ ಅಮೂಲ್ಯವಾದ ಪ್ರಾಯೋಗಿಕ ಅನುಭವ ನೀಡುತ್ತವೆ. ತಂತ್ರಜ್ಞಾನ ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.ಜೀವನದಲ್ಲಿ ಉನ್ನತ ಶ್ರೇಷ್ಠತೆಗೆ ಶ್ರಮಿಸಬೇಕು. ತಂತ್ರಜ್ಞಾನವು ಜೀವನದ ಪ್ರತಿ ಕ್ಷೇತ್ರದ ಅವಿಭಾಜ್ಯ ಅಂಗವಾಗಿದೆ. ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ನಿರಂತರ ಕಲಿಕೆ ಮತ್ತು ಹೊಂದಿಕೊಳ್ಳುವಿಕೆ ಅಗತ್ಯ. ಅಂಕಗಳು ಮಾತ್ರ ಸಾಕಾಗುವುದಿಲ್ಲ — ಬದಲಿಗೆ ವಿದ್ಯಾರ್ಥಿಗಳು ನಿಜವಾದ ಪರಿಣತಿ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಗಣಕ ವಿಜ್ಞಾನ ವಿಭಾಗಕ್ಕೆ ಬೇಡಿಕೆಯಿದ್ದು, ಹೆಚ್ಚಿನ ಉದ್ಯೋಗ ಸೃಷ್ಟಿಯಾಗುತ್ತದೆ ಎಂದರು.ಮಹಿಳಾ ಸಬಲೀಕರಣಕ್ಕೆ ಜೆಎಸ್ಎಸ್ ಸಂಸ್ಥೆಯ ಕೊಡುಗೆ ಅಪಾರ ಎಂದು ಶ್ಲಾಘಿಸಿದರು. ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಒಳ್ಳೆಯದಕ್ಕಾಗಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ನೆಮ್ಮದಿಯ ಬದುಕಿನ ಕಡೆಗೆ ಸಂತೋಷದಿಂದ ಸಾಗಬೇಕು ಎಂದು ತಿಳಿಸಿದರು.ಪ್ರಾಂಶುಪಾಲ ಡಾ. ರೇಚಣ್ಣ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಎಂ. ಸತೀಶ್ ಕುಮಾರ್ ಇದ್ದರು. ಕಾಲೇಜಿನ ಸಿಬ್ಬಂದಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.ರೀತು ''''''''ಪ್ರವಿಧಿ-2026'''''''' ಫೆಸ್ಟ್ ನ ವರದಿ ಮಂಡಿಸಿದರು. ಅಂತಿಮ ಬಿಸಿಎನ ಮೇಘನಾ ಮತ್ತು ತಂಡದವರು ಪ್ರಾರ್ಥಿಸಿದರು. ಎಚ್.ಎಸ್. ದೀಪ್ತಿ ಗಣ್ಯರನ್ನು ಸ್ವಾಗತಿಸಿದರು. ಎನ್.ಎ. ಸುಕೃತಾ ವಂದಿಸಿದರು.ಆರ್. ಧನ್ಯಾ ಮತ್ತು ಪ್ರತಿಭಾ ಭಟ್ ಕಾರ್ಯಕ್ರಮ ನಿರೂಪಿಸಿದರು.
ಜ್ಞಾನವನ್ನು ಕೌಶಲ್ಯಗಳಾಗಿ ಪರಿವರ್ತಿಸಬೇಕು
ಕೌಶಲ್ಯಗಳಿಲ್ಲದ ಪದವಿಗಳು ಪ್ರಯೋಜನಕ್ಕೆ ಬರುವುದಿಲ್ಲ. ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವ ಅಗತ್ಯತೆ ಹೆಚ್ಚಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಹೊಂದಿಕೊಳ್ಳದವರು ಹಿಂದುಳಿದುಬಿಡುತ್ತಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.