ಸಾರಾಂಶ
ಹಿಂದೆ ಉದ್ಯೋಗ ದೊರಕಬೇಕಾದರೆ ತುಂಬಾ ಕಷ್ಟವಾಗುತ್ತಿತ್ತು. ಆದರೆ ಈಗ ಎಲ್ಲವೂ ಸುಲಭವಾಗಿದೆ.
ಕನ್ನಡಪ್ರಭ ವಾರ್ತೆ ಮೈಸೂರು
ಸರ್ಕಾರ ಇತ್ತೀಚಿನ ದಿನಗಳಲ್ಲಿ ಅನೇಕ ಕೌಶಲ್ಯಾಭಿವೃದ್ದಿ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ನೀಡಿದೆ. ವಿದ್ಯಾರ್ಥಿಗಳು ಇದನ್ನು ಬಳಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ. ನಾರಾಯಣಮೂರ್ತಿ ಹೇಳಿದರು.ನಗರದ ಜೆಎಸ್‌ಎಸ್‌ಮಹಿಳಾ ಕಾಲೇಜಿನಲ್ಲಿ ಗುರುವಾರ ಮೃದು ಕೌಶಲ್ಯ ಮತ್ತು ವೃತ್ತಿಪರ ಅವಕಾಶಗಳು ಕುರಿತು ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದೆ ಉದ್ಯೋಗ ದೊರಕಬೇಕಾದರೆ ತುಂಬಾ ಕಷ್ಟವಾಗುತ್ತಿತ್ತು. ಆದರೆ ಈಗ ಎಲ್ಲವೂ ಸುಲಭವಾಗಿದೆ. ಆದರೆ ಕೌಶಲ್ಯ ಇರಬೇಕು. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕೌಶಲ್ಯವನ್ನು ವೃದ್ಧಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ. ಸಾಧ್ಯವಾದರೆ ಸ್ಕಿಲ್‌ಕೆನೆಕ್ಟ್ ಪೋರ್ಟಲ್‌ಗೆ ಭೇಟಿ ನೀಡಿ ಎಂದು ಅವರು ಸಲಹೆ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಪ್ರೊ.ಆರ್. ಮುಗೇಶಪ್ಪ ಕೌಶಲ್ಯದ ಮಹತ್ವ ಕುರಿತು ಮಾತನಾಡಿದರು.
ಕಾರ್ಯಕ್ರಮವು ಐದು ತಾಂತ್ರಿಕ ಗೋಷ್ಠಿಯನ್ನು ಒಳಗೊಂಡಿತ್ತು. ಕಾಲೇಜಿನ ಪ್ರಾಂಶುಪಾಲೆ ಡಾ.ಎಂ. ಪೂರ್ಣಿಮಾ, ಶೈಕ್ಷಣಿಕ ಡೀನ್ ಡಾ. ರೇಚಣ್ಣ ಇದ್ದರು.ತೃತೀಯ ಬಿಎ ವಿದ್ಯಾರ್ಥಿನಿ ಎಸ್.ಬಿ. ಪ್ರಿಯಾ ಸ್ವಾಗತಿಸಿದರು. ದ್ವಿತೀಯ ಬಿಕಾಂನ ಸುಷ್ಮಿತಾ ವಂದಿಸಿದರು. ಧ್ರುತಿ ಮತ್ತು ತಂಡದವರು ಪ್ರಾರ್ಥಿಸಿದರು. ಕೆ.ಎನ್. ವಿಜಯಲಕ್ಷ್ಮೀ ನಿರೂಪಿಸಿದರು.