ಜೆಎಸ್‌ಎಸ್ ಮಹಿಳಾ ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿನಿಯರ ಸಂಘದ ಸಮಾವೇಶ

| Published : Sep 04 2025, 01:00 AM IST

ಜೆಎಸ್‌ಎಸ್ ಮಹಿಳಾ ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿನಿಯರ ಸಂಘದ ಸಮಾವೇಶ
Share this Article
  • FB
  • TW
  • Linkdin
  • Email

ಸಾರಾಂಶ

ಸಂಘದ ಕಾರ್ಯದರ್ಶಿ ವಾರ್ಷಿಕ ವರದಿ ಮಂಡಿಸಿದರು, ನಂತರ ಸಂಘದ ವತಿಯಿಂದ 2024- 25ನೇ ಶೈಕ್ಷಣಿಕ ಸಾಲಿನ ಎಲ್ಲ ವಿಭಾಗಗಳ ಹಾಗೂ ಡಿಸಿಇಟಿ ಶ್ರೇಷ್ಠ ವಿದ್ಯಾರ್ಥಿನಿಯರನ್ನು ಅವರ ಅತ್ಯುತ್ತಮ ಸಾಧನೆಗಾಗಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಮೈಸೂರು

ನಗರದ ಜೆಎಸ್ಎಸ್ ಮಹಿಳಾ ಪಾಲಿಟೆಕ್ನಿಕ್‌ ನಲ್ಲಿ 20ನೇ ಹಿರಿಯ ವಿದ್ಯಾರ್ಥಿನಿಯರ ಸಮಾವೇಶ ಹಾಗೂ ಡಾ. ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ 110ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ನೆರವೇರಿತು.

ಮುಖ್ಯಅತಿಥಿಯಾಗಿದ್ದ ಎಂ. ಎ. ನೀಲಾಂಬಿಕಾ ಮಾತನಾಡಿ, ರಾಜೇಂದ್ರ ಸ್ವಾಮೀಜಿಯವರ ಮಾತೃಸಹಜ ಸ್ವಭಾವ, ಮಹಿಳಾ ಶಿಕ್ಷಣ ಕ್ಷೇತ್ರಕ್ಕೆ ಅವರ ಮಹತ್ವದ ಕೊಡುಗೆಯ ಬಗ್ಗೆ ತಿಳಿಸಿಕೊಟ್ಟರು.

ಸಂಘದ ಕಾರ್ಯದರ್ಶಿ ವಾರ್ಷಿಕ ವರದಿ ಮಂಡಿಸಿದರು, ನಂತರ ಸಂಘದ ವತಿಯಿಂದ 2024- 25ನೇ ಶೈಕ್ಷಣಿಕ ಸಾಲಿನ ಎಲ್ಲ ವಿಭಾಗಗಳ ಹಾಗೂ ಡಿಸಿಇಟಿ ಶ್ರೇಷ್ಠ ವಿದ್ಯಾರ್ಥಿನಿಯರನ್ನು ಅವರ ಅತ್ಯುತ್ತಮ ಸಾಧನೆಗಾಗಿ ಗೌರವಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಂಘದ ಅಧ್ಯಕ್ಷ ವಿ.ಬಿ. ಲೋಕೇಶ ಮಾತನಾಡಿ, ಹಿರಿಯ ವಿದ್ಯಾರ್ಥಿನಿಯರ ಹಾಗೂ ಕಾಲೇಜಿನ ಬಾಂಧವ್ಯ ಮತ್ತು ಪ್ರಾಮುಖ್ಯತೆಯನ್ನು ಹೇಳುತ್ತಾ, ಪ್ರಸ್ತುತ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಹಿರಿಯ ವಿದ್ಯಾರ್ಥಿಗಳ ಅನುಭವ, ಪರಿಣಿತಿ ಮತ್ತು ತಾಂತ್ರಿಕ ಮಾರ್ಗದರ್ಶನದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಹಿರಿಯ ವಿದ್ಯಾರ್ಥಿನಿಯರು ಉತ್ಸಾಹದಿಂದ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುವ ಮೂಲಕ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು, ಕಾರ್ಯಕ್ರಮದ ಆಯೋಜನೆ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಸಂಘದ ಪದಾಧಿಕಾರಿಗಳು, ಕಾಲೇಜಿನ ನಿವೃತ್ತ ನೌಕರರು ಮತ್ತು ಸಿಬ್ಬಂದಿ ಇದ್ದರು.