ಜೆಟಿಒ ನೇಮಕ: ಆದ್ಯತೆ ಸಲ್ಲಿಕೆಗೆಅಭ್ಯರ್ಥಿಗಳಿಗೆ ಕೆಪಿಎಸ್ಸಿ ಸೂಚನೆ

| Published : Jun 29 2024, 01:21 AM IST / Updated: Jun 29 2024, 05:48 AM IST

KPSC New 01
ಜೆಟಿಒ ನೇಮಕ: ಆದ್ಯತೆ ಸಲ್ಲಿಕೆಗೆಅಭ್ಯರ್ಥಿಗಳಿಗೆ ಕೆಪಿಎಸ್ಸಿ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಅಧೀನದ ಐಟಿಐ ಕಾಲೇಜುಗಳಲ್ಲಿ ಖಾಲಿ ಇರುವ 1500 ಕಿರಿಯ ತರಬೇತಿ ಅಧಿಕಾರಿ (ಜೆಟಿಒ) ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಅಭ್ಯರ್ಥಿಗಳು ತಮ್ಮ ‘ವೃತ್ತಿ ಆದ್ಯತೆ’ಯನ್ನು ಆನ್‌ಲೈನ್ ಮೂಲಕ ಸಲ್ಲಿಸುವಂತೆ ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

 ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಅಧೀನದ ಐಟಿಐ ಕಾಲೇಜುಗಳಲ್ಲಿ ಖಾಲಿ ಇರುವ 1500 ಕಿರಿಯ ತರಬೇತಿ ಅಧಿಕಾರಿ (ಜೆಟಿಒ) ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಅಭ್ಯರ್ಥಿಗಳು ತಮ್ಮ ‘ವೃತ್ತಿ ಆದ್ಯತೆ’ಯನ್ನು ಆನ್‌ಲೈನ್ ಮೂಲಕ ಸಲ್ಲಿಸುವಂತೆ ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

ಅಭ್ಯರ್ಥಿಗಳು ಜೂ.27ರಿಂದ ಜು.6ರವರೆಗೆ ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಿ ಆದ್ಯತೆಯನ್ನು ಸಲ್ಲಿಸಬೇಕು. ಆದ್ಯತೆಯ ಅನುಸಾರ ಮೆರಿಟ್ ಮತ್ತು ಮೀಸಲಾತಿ ನಿಯಮದನ್ವಯ ಒಂದು ವೃತ್ತಿಗೆ ಮಾತ್ರ ಪರಿಗಣಿಸಿ ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಆದ್ಯತೆ ನೀಡದೇ ಇದ್ದಲ್ಲಿ, ಅಭ್ಯರ್ಥಿಗಳು ಅರ್ಜಿಯಲ್ಲಿ ಕೋರಿರುವ ಮೀಸಲಾತಿ ಮತ್ತು ಪಡೆದಿರುವ ಅಂಕಗಳ ಆಧಾರದ ಮೇಲೆ ಯಾವುದಾದರೂ ಒಂದು ವೃತ್ತಿಗೆ ಹಂಚಿಕೆ ಮಾಡಿ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಕೆಪಿಎಸ್‌ಸಿಯಿಂದ 2018ರಲ್ಲಿ ಹೊರಡಿಸಿದ್ದ ಅಧಿಸೂಚನೆಯಡಿ 23 ವೃತ್ತಿಗಳಲ್ಲಿ ಖಾಲಿ ಇರುವ 1500ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಒಂದಕ್ಕಿಂತ ಹೆಚ್ಚು ವೃತ್ತಿಗಳಿಗೆ ಅನೇಕ ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಇದರಿಂದ ಕೆಲವರಿಗೆ ಅವಕಾಶ ಸಿಕ್ಕರೆ, ಮತ್ತೆ ಕೆಲವರಿಗೆ ಉತ್ತಮ ಅಂಕ ಪಡೆದಿದ್ದರೂ ಕೆಲಸ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೆಲವು ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ ಹೈಕೋರ್ಟ್, ಒಂದಕ್ಕಿಂತ ಹೆಚ್ಚಿನ ವೃತ್ತಿಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಂದ ಆದ್ಯತೆಯನ್ನು ಪಡೆದು ಪರಿಷ್ಕೃತ ಪಟ್ಟಿ ಪ್ರಕಟಿಸುವಂತೆ ಕೆಪಿಎಸ್‌ಸಿಗೆ ಹೈಕೋರ್ಟ್ ಸೂಚಿಸಿತ್ತು.