ಸಾರ್ವಜನಿಕರು ಜಾಗೃತಿಗಳಲ್ಲಿ ಪಾಲ್ಗೊಂಡು ಮಾದಕ ದ್ರವ್ಯಗಳಿಂದ ದೂರವಿದ್ದು, ಉತ್ತಮ ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುಬೇಕು. ವಿದ್ಯಾರ್ಥಿಗಳು ಕೂಡ ದುಶ್ಚಟಗಳಿಗೆ ಬಲಿಯಾಗದೆ ಶಿಕ್ಷಣ, ಶಿಸ್ತು ಮತ್ತು ಉತ್ತಮ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯಗಳ ಅರಿವು ಮತ್ತು ಆರೋಗ್ಯಕರ ಜೀವನದ ಮಾರ್ಗದರ್ಶನ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

1ನೇ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಕೃಷ್ಣಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಾದಕ ದ್ರವ್ಯಗಳ ದುಷ್ಪರಿಣಾಮಗಳು ಹಾಗೂ ಅವುಗಳಿಂದ ದೂರವಿರುವುದರ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ. ಶ್ರೀನಿವಾಸ್ ಮಾತನಾಡಿ, ಯುವ ಜನಾಂಗ ಜೀವನದಲ್ಲಿ ಕೆಲವು ಮಾದಕ ವ್ಯಸನಗಳ ಅಭ್ಯಾಸ ಮಾಡಿಕೊಂಡು ವಿವಿಧ ಸಾಂಕ್ರಾಮಿಕದಿಂದ ಬಳಲಿ ಕ್ಯಾನ್ಸರ್ ನಂತಹ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅದನ್ನು ತಡೆಯಲು ಸರ್ಕಾರ ವಿವಿಧ ಯೋಜನೆಗಳ ಮೂಲಕ ಜಾಗೃತಿ ಅರಿವು ಕಾರ್ಯಕ್ರಮ ನಡೆಸಿ ತಡೆಯುವ ಪ್ರಯತ್ನ ಮಾಡುತ್ತಿದೆ ಎಂದರು.

ಸಾರ್ವಜನಿಕರು ಜಾಗೃತಿಗಳಲ್ಲಿ ಪಾಲ್ಗೊಂಡು ಮಾದಕ ದ್ರವ್ಯಗಳಿಂದ ದೂರವಿದ್ದು, ಉತ್ತಮ ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುಬೇಕು. ವಿದ್ಯಾರ್ಥಿಗಳು ಕೂಡ ದುಶ್ಚಟಗಳಿಗೆ ಬಲಿಯಾಗದೆ ಶಿಕ್ಷಣ, ಶಿಸ್ತು ಮತ್ತು ಉತ್ತಮ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಮರೀಗೌಡ ಮಾತನಾಡಿ, ಮಾದಕ ದ್ರವ್ಯ ಸೇವನೆಯಿಂದ ವ್ಯಕ್ತಿಯ ಆರೋಗ್ಯ, ಕುಟುಂಬ ಮತ್ತು ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದರು. ಆರೋಗ್ಯ ಅಧಿಕಾರಿ ಪುಷ್ಪ, ವಕೀಲರ ಸಂಘದ ಕಾರ್ಯದರ್ಶಿ ಸಿ.ಆರ್.ದಿನೇಶ್, ಶಾಲೆ ಮುಖ್ಯ ಶಿಕ್ಷಕಿ ಷಹೆದ ಬಾನು, ಶಿಕ್ಷಕರಾದ ಲಕ್ಷ್ಮಮ್ಮ, ವೆಂಕಟೇಶ್ ರಾಚವ್, ತ್ರಿವೇಣಿ, ಸೇರಿದಂತೆ ಶಾಲೆಯ ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.