ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ

| Published : Nov 09 2023, 01:01 AM IST

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ
Share this Article
  • FB
  • TW
  • Linkdin
  • Email

ಸಾರಾಂಶ

ಅಕ್ಷಯ್ಯ್‌ ಕಲ್ಲೇಗ ಕೊಲೆ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಪುತ್ತೂರು: ಪುತ್ತೂರಿನ ನೆಹರುನಗರದಲ್ಲಿ ಕಲ್ಲೇಗ ಟೈಗರ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮಂಗಳವಾರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರು ಪಡಿಸಲಾಗಿತ್ತು. ಬಳಿಕ ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಗಳಿಗೆ ನ.೨೨ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ.

ಸೋಮವಾರ ತಡರಾತ್ರಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರ ತಂಡ ತಲವಾರಿನಿಂದ ಹತ್ಯೆ ಮಾಡಿತ್ತು. ಅದಾದ ಬಳಿಕ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು. ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದರು.