ಕಾನೂನು ಶಿಬಿರಗಳ ದಾಖಲೆ ನಿರ್ಮಿಸಿದ ನ್ಯಾ. ಸುನೀಲ್

| Published : May 23 2025, 12:00 AM IST

ಸಾರಾಂಶ

ಜೈಲಿನ ಕೈದಿಗಳು, ಜಿಲ್ಲೆಯ ಪ್ರತಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ನಗರ ಹಳ್ಳಿಗಳಲ್ಲಿ ಸುನಿಲ ಎಸ್.ಹೊಸಮನಿ ಅವರ ಹೆಸರು ಕೇಳಿ ಬರುತ್ತದೆ, ಯಾವುದೇ ವೃತ್ತಿಯನ್ನು ಇಷ್ಟಪಟ್ಟು ಮಾಡಿದರೆ ಸಿಗುವ ತೃಪ್ತಿ ಸಾಮಾನ್ಯವಲ್ಲ, ಅಂತಹ ಕೆಲವೇ ವ್ಯಕ್ತಿಗಳಲ್ಲಿ ಇವರು ಒಬ್ಬರಾಗಿದ್ದಾರೆ. ೩ ವರ್ಷ ಅವಧಿಯಲ್ಲಿ ೭೨೫೦ಕ್ಕೂ ಹೆಚ್ಚು ಕಾನೂನು ಅರಿವು- ನೆರವು ಶಿಬಿರ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯಲ್ಲಿ ತಮ್ಮ ಹೆಜ್ಜೆ ಗುರುತು ಬಿಟ್ಟು ಹೋಗುತ್ತಿರುವ ಮತ್ತು ವೃತ್ತಿಯಲ್ಲಿ ಆಕರ್ಷಣೀಯ ವ್ಯಕ್ತಿತ್ವ ಹೊಂದಿದನ್ಯಾಯಾಧೀಶರಾದ ಸುನೀಲ್ ಎಸ್.ಹೊಸಮನಿ ೩ ವರ್ಷ ಅವಧಿಯಲ್ಲಿ ೭೨೫೦ಕ್ಕೂ ಹೆಚ್ಚು ಕಾನೂನು ಅರಿವು- ನೆರವು ಶಿಬಿರ ನಡೆಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ.ಮಂಜುನಾಥ್ ಶ್ಲಾಘಿಸಿದರು.ಕೋಲಾರದಿಂದ ತುಮಕೂರು ಜಿಲ್ಲೆಗೆ ಸಿಜೆಎಂ ಆಗಿ ವರ್ಗಾವಣೆಗೊಂಡಿರುವ ನ್ಯಾ.ಸುನೀಲ ಎಸ್.ಹೊಸಮನಿರನ್ನು ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.ನ್ಯಾಯಾಧೀಶರ ಕರ್ತವ್ಯ ನಿಷ್ಠೆ

ಜೈಲಿನ ಕೈದಿಗಳು, ಜಿಲ್ಲೆಯ ಪ್ರತಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ನಗರ ಹಳ್ಳಿಗಳಲ್ಲಿ ಸುನಿಲ ಎಸ್.ಹೊಸಮನಿ ಅವರ ಹೆಸರು ಕೇಳಿ ಬರುತ್ತದೆ, ಯಾವುದೇ ವೃತ್ತಿಯನ್ನು ಇಷ್ಟಪಟ್ಟು ಮಾಡಿದರೆ ಸಿಗುವ ತೃಪ್ತಿ ಸಾಮಾನ್ಯವಲ್ಲ, ಅಂತಹ ಕೆಲವೇ ವ್ಯಕ್ತಿಗಳಲ್ಲಿ ಇವರು ಒಬ್ಬರಾಗಿದ್ದು, ಅವರಿಗೆ ಮತ್ತಷ್ಟು ಉನ್ನತ ಸ್ಥಾನ ಸಿಗಲಿ ಎಂದು ಹಾರೈಸಿದರು.೨.೮೦ ಲಕ್ಷ ಪ್ರಕರಣ ಇತ್ಯರ್ಥ

ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದ ನ್ಯಾಯಾಧೀಶರಾದ ಸುನಿಲ್ ಎಸ್.ಹೊಸಮನಿ, ಕೋಲಾರ ಜಿಲ್ಲೆಯಲ್ಲಿ ತಮ್ಮ ಕಾರ್ಯಕ್ಕೆ ಸಿಕ್ಕ ಸಹಕಾರ ನೆನೆದು ಭಾವುಕರಾಗಿ ಮಾತನಾಡಿ, ಇಲ್ಲಿ ಕೆಲಸ ಮಾಡಲು ಕೆಲವರಿಗೆ ಹೆದರಿಕೆ ಇದೆ. ಆದರೆ ನನ್ನ ಅವಧಿಯಲ್ಲಿ ಇಲ್ಲಿನ ಜನತೆಯೊಂದಿಗೆ ಒಡನಾಟ, ವಕೀಲರ ಸಹಕಾರ, ಕಾನೂನು ಸ್ವಯಂಸೇವಕರ ತಂಡದ ನೆರವು, ಮಧ್ಯಸ್ಥಗಾರರ ಕ್ರಿಯಾಶೀಲತೆ ಎಲ್ಲವೂ ನೆರವಿಗೆ ಬಂದಿದೆ ಎಂದು ಸ್ಮರಿಸಿದರು.ಬಾಲಕಾರ್ಮಿಕತೆ ಮುಕ್ತ ಜಿಲ್ಲೆ

ವ್ಯಸನಮುಕ್ತ, ಬಾಲ್ಯವಿವಾಹ, ಬಾಲಕಾರ್ಮಿಕತೆ ಮುಕ್ತ ಜಿಲ್ಲೆಯಾಗಿಸುವ ಪ್ರಯತ್ನ ಮಾಡಿದ್ದೇನೆ, ಪ್ಲಾಸ್ಟಿಕ್ ಮುಕ್ತ ಕರ್ನಾಟಕ ರಾಜ್ಯ ಕಾನೂನು ಪ್ರಾಧಿಕಾರದ ಈ ವರ್ಷದ ಧ್ಯೇಯವಾಗಿದೆ, ಅದು ಸಾಕಾರಗೊಳ್ಳಲಿ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಎಂ.ಮುನೇಗೌಡ, ನ್ಯಾಯಾಲಯದ ರಜಾ ಕಾಲದಲ್ಲೂ ಸುನಿಲ್ ಹೊಸಮನಿ ಅವರ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಇಷ್ಟೊಂದು ವಕೀಲರು ಹಾಜರಿರುವುದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.

ರಾಜೀ ನಂಧಾನ ಮೂಲಕ ಇತ್ಯರ್ಥ

ಇಡೀ ರಾಜ್ಯದಲ್ಲೇ ಕಾನೂನು ಸೇವಾ ಪ್ರಾಧಿಕಾರದಿಂದ ಇಷ್ಟೊಂದು ಜನಪರ ಕೆಲಸ ಮಾಡಬಹುದು, ಕಾನೂನಿನ ಅರಿವು ನೀಡಿ, ರಾಜೀ ಸಂಧಾನದ ಮೂಲಕ ಜನತೆಗೆ ಉತ್ತಮ ಬದುಕು ಕಲ್ಪಿಸಬಹುದು ಎಂಬ ಧ್ಯೇಯವನ್ನು ಸಾಧಿಸಿ ತೋರಿಸಿರುವುದು ಹೊಸಮನಿ ಅವರ ಸಾಧನೆ ಎಂದರು.ಹಿರಿಯ ವಕೀಲ ಕೆ.ವಿ.ಶಂಕರಪ್ಪ, ವಕೀಲರಾದ ಜಯಪ್ರಕಾಶ್,ವೆಂಕಟೇಶ್,ಸುಬ್ರಮಣಿ ಮತ್ತಿತರರು ಮಾತನಾಡಿದರು. ವಕೀಲರಾದ ಸಿ.ಬಿ.ಜಯರಾಂ, ರಘುಪತಿಗೌಡ, ವಕೀಲರ ಸಂಘದ ಕಾರ್ಯದರ್ಶಿ ಬೈರಾರೆಡ್ಡಿ, ಉಪಾಧ್ಯಕ್ಷ ರವೀಂದ್ರಬಾಬು, ಖಜಾಂಚಿ ನವೀನ್ ಗೌಡ, ಹಿರಿಯ ವಕೀಲ ಬಿಸಪ್ಪಗೌಡ, ಕೋದಂಡಪ್ಪ, ಪಿಎನ್.ಕೃಷ್ಣಾರೆಡ್ಡಿ, ಜಿ.ಶ್ರೀಧರ್, ಎ.ವಿ.ಆನಂದ್, ಕೃಷ್ಣಪ್ಪ ಇದ್ದರು.