ಮಾಗಡಿ: ತಾಲೂಕಿನ ಜುಟ್ಟನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ ₹6.77 ಲಕ್ಷ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜೆ.ಪಿ.ಚಂದ್ರೇಗೌಡ ಹೇಳಿದರು
ಮಾಗಡಿ: ತಾಲೂಕಿನ ಜುಟ್ಟನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ ₹6.77 ಲಕ್ಷ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜೆ.ಪಿ.ಚಂದ್ರೇಗೌಡ ಹೇಳಿದರು.
ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸದಸ್ಯರು, ರೈತರು, ನಿರ್ದೇಶಕರು ಹಾಗೂ ಸಿಬ್ಬಂದಿ ಸಹಕಾರದಿಂದ ಮುಂದಿನ ದಿನಗಳಲ್ಲಿ ಸಂಘದ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು. ಈಗಾಗಲೇ ಕಟ್ಟಡಕ್ಕೆ 50 ಲಕ್ಷ ಖರ್ಚು ಮಾಡಿದ್ದು ಇನ್ನೂ 40 ಲಕ್ಷ ಅನುದಾನ ಬೇಕಿದೆ. 25 ಲಕ್ಷ ಸಾಲ ತೆಗೆದುಕೊಂಡು ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದು ತಿಳಿಸಿದರು.ಸಂಘದ ಸದಸ್ಯರು ಹಾಗೂ ರೈತರ ಸಹಕಾರದಿಂದ ಸಂಘ ಉತ್ತಮವಾಗಿ ಮುನ್ನಡೆಯುತ್ತಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್.ಅಶೋಕ್ ಸಹಕಾರದಿಂದ ಸುಮಾರು 57 ಸದಸ್ಯರಿಗೆ 93 ಲಕ್ಷ ಸಾಲ ವಿತರಿಸಲಾಗಿದೆ. ಹೊಸ ಸಾಲ ಪಡೆಯುವ ಸದಸ್ಯರಿಗೆ ಷೇರು ಬಂಡವಾಳ ಕುರಿತು ಮಾಹಿತಿ ನೀಡಿದ ಅವರು, ₹2 ಲಕ್ಷ ಸಾಲ ಪಡೆದರೆ ಶೇ.10ರಂತೆ ₹20 ಸಾವಿರ ಷೇರು ಬಂಡವಾಳವಾಗಿ ಸಂಘದಲ್ಲಿ ಇರಿಸಲಾಗುತ್ತದೆ. ಸಾಲ ಸಂಪೂರ್ಣ ತೀರಿಸುವ ಸಂದರ್ಭದಲ್ಲಿ ಈ ಮೊತ್ತವನ್ನು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.
ಸಂಘದ ಆಡಳಿತದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಲಾಗುತ್ತಿದ್ದು, ನಿರ್ದೇಶಕರು, ಸದಸ್ಯರು ಹಾಗೂ ಸಿಬ್ಬಂದಿಗೆ ಸಂಘದ ಚಟುವಟಿಕೆಗಳ ಬಗ್ಗೆ ಅಗತ್ಯ ಮಾಹಿತಿ ನೀಡಲಾಗುತ್ತಿದೆ. ಸದಸ್ಯರಿಗೆ ಯಾವುದೇ ಸಮಸ್ಯೆ ಇದ್ದರೆ ನೇರವಾಗಿ ಆಡಳಿತ ಮಂಡಳಿಯ ಗಮನಕ್ಕೆ ತಂದಲ್ಲಿ ಪರಿಹರಿಸಲು ಪ್ರಯತ್ನಿಸಲಾಗುವುದು ಎಂದರು.ಇದೇ ವೇಳೆ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಗೋವಿಂದಸ್ವಾಮಿ ನಿರ್ದೇಶಕರಾದ ರಾಜಶೇಖರ್, ಮಂಜುನಾಥ್, ಮುಕುಂದಪ್ಪ, ಜಯಣ್ಣ, ವೆಂಕಟೇಶಯ್ಯ, ಕುಮಾರ್, ಸರೋಜಮ್ಮ, ಮಮತಾಜ್, ಸಿಇಒ ಚಂದ್ರಶೇಖರ್ ಇತರರು ಭಾಗವಹಿಸಿದ್ದರು.(ಫೋಟೋ ಕ್ಯಾಪ್ಷನ್)
ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಸಂಘದ ಅಧ್ಯಕ್ಷ ಜೆ.ಪಿ.ಚಂದ್ರೇಗೌಡ ಬೆಳೆ ಸಾಲದ ಆದೇಶ ಪತ್ರ ವಿತರಿಸಿದರು.