ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ಗೃಹಿಣಿ ಆತ್ಮಹತ್ಯೆ

| Published : Aug 26 2025, 01:02 AM IST

ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ಗೃಹಿಣಿ ಆತ್ಮಹತ್ಯೆ
Share this Article
  • FB
  • TW
  • Linkdin
  • Email

ಸಾರಾಂಶ

ಧರ್ಮಸ್ಥಳ ಮೈಕ್ರೋ ಪೈನಾನ್ಸ್ ಅವರು ಸಾಲ ಮರು ಪಾವತಿಸುವಂತೆ ವಾರದಿಂದ ಕಿರುಕುಳ

ಕನ್ನಡಪ್ರಭ ವಾರ್ತೆ ಸರಗೂರುಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೇ ಗೃಹಿಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸರಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಆತ್ಮಹತ್ಯೆಗೂ ಮುನ್ನಾ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ತನ್ನ ಮೊಬೈಲ್ ನಲ್ಲಿ ವೀಡಿಯೊ ಸೆರೆ ಹಿಡಿದಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ತಾಲೂಕಿನ ಚಾಮಲಾಪುರ ಗ್ರಾಮದ ಜ್ಯೋತಿ (36) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತರಿಗೆ ಪತಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ (ಧರ್ಮಸ್ಥಳ ಮೈಕ್ರೋ ಫೈನಾನ್ಸ್) ಹಾಗೂ ಅತಿಯಾಗಿ ಕೈ ಸಾಲ ಮಾಡಿಕೊಂಡಿದ್ದು, ಧರ್ಮಸ್ಥಳ ಮೈಕ್ರೋ ಪೈನಾನ್ಸ್ ಅವರು ಸಾಲ ಮರು ಪಾವತಿಸುವಂತೆ ವಾರದಿಂದ ಕಿರುಕುಳ ನೀಡುತ್ತಿದ್ದರು. ಇದಲ್ಲದೆ ಮೂರು ದಿನಗಳು ಮನೆಯ ಮುಂಭಾಗದಲ್ಲಿಯೇ ಠಿಕಾಣಿ ಹೂಡಿದ್ದರು ಎನ್ನಲಾಗಿದೆ. ಸಾಲದ ಕಂತಿನ ಹಣ ಕೊಡುವಂತೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ನೀಡಿದ ಕಿರುಕುಳವೇ ಕಾರಣವೆಂದು ಮೃತಳ ಪತಿ ಕೃಷ್ಣನಾಯಕ ಅವರು ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಪತ್ನಿಯು ಐದು ತಿಂಗಳ ಹಿಂದೆ ಧರ್ಮಸ್ಥಳ ಸಂಘದಲ್ಲಿ ಎರಡು ಲಕ್ಷ ರು. ಸಾಲ ಪಡೆದಿದ್ದರು. ಇದಲ್ಲದೆ ಕೈ ಸಾಲವಾಗಿ ಮೂರು ಲಕ್ಷ ರು. ಪಡೆದಿದ್ದರು. ಸಂಘದ ಬಾಬ್ತು 1,700 ರು. ಕಂತು ಹಣ ಪಾವತಿಸುವಂತೆ ಸಂಘದ ಪ್ರತಿನಿಧಿಯೊಬ್ಬರು ಮನೆಯ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಇದರಿಂದ ಮನನೊಂದು ಪತ್ನಿ ಜ್ಯೋತಿ ಡೆತ್ ನೋಟ್ ಬರೆದಿಟ್ಟು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಸರಗೂರು ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ. ಮೊಬೈಲ್, ಡೆತ್ ನೋಟ್ ನ್ನು ಪಡೆದುಕೊಂಡು ತನಿಖೆಗಾಗಿ ಮೇಲಾಧಿಕಾರಿಗಳಿಗೆ ರವಾನಿಸಲಾಗಿದೆ ಎಂದು ಸರಗೂರು ಪೊಲೀಸ್‌ ಠಾಣೆಯ ಉಪನಿರೀಕ್ಷಕ ಆರ್. ಕಿರಣ್ ತಿಳಿಸಿದ್ದಾರೆ.