ಸಾರಾಂಶ
ದೇವರಹಿಪ್ಪರಗಿ: ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಸಂದ ಹಿನ್ನೆಲೆಯಲ್ಲಿ ಜ್ಯೋತಿ ರಥ ಯಾತ್ರೆಯು ಜ.27ರಂದು ಪಟ್ಟಣಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಲು ಹಾಗೂ ಜ.28ರಂದು ಅದ್ಧೂರಿಯಾಗಿ ಮೆರವಣಿಗೆ ಮಾಡಲು ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಪ್ರಯುಕ್ತ ಕರ್ನಾಟಕ ಸಂಭ್ರಮ 50 ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಎಂಬ ಹೆಸರಿನಲ್ಲಿ ಈ ವರ್ಷ ಕರ್ನಾಟಕ ಇತಿಹಾಸ, ಕಲೆ ಸಾಹಿತ್ಯ, ಸಾಂಸ್ಕೃತಿಕ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ ಕರ್ನಾಟಕದ ಅರಿವು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥ ಯಾತ್ರೆ ಆರಂಭಗೊಂಡಿದೆ.
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಸಂದ ಹಿನ್ನೆಲೆಯಲ್ಲಿ ಜ್ಯೋತಿ ರಥ ಯಾತ್ರೆಯು ಜ.27ರಂದು ಪಟ್ಟಣಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಲು ಹಾಗೂ ಜ.28ರಂದು ಅದ್ಧೂರಿಯಾಗಿ ಮೆರವಣಿಗೆ ಮಾಡಲು ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಪ್ರಯುಕ್ತ ಕರ್ನಾಟಕ ಸಂಭ್ರಮ 50 ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಎಂಬ ಹೆಸರಿನಲ್ಲಿ ಈ ವರ್ಷ ಕರ್ನಾಟಕ ಇತಿಹಾಸ, ಕಲೆ ಸಾಹಿತ್ಯ, ಸಾಂಸ್ಕೃತಿಕ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ ಕರ್ನಾಟಕದ ಅರಿವು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥ ಯಾತ್ರೆ ಆರಂಭಗೊಂಡಿದೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ತಹಸೀಲ್ದಾರ ಪ್ರಕಾಶ ಸಿಂದಗಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಈ ವೇಳೆ ಉಪಸ್ಥಿತರಿದ್ದ ಅಧಿಕಾರಿಗಳು, ಕನ್ನಡಪರ ಸಂಘಟನೆಗಳ ಪ್ರಮುಖರ ಅಭಿಪ್ರಾಯದ ಮೇರೆಗೆ ಸಡಗರ ಸಂಭ್ರಮದಿಂದ ರಥ ಯಾತ್ರೆಗೆ ಸ್ವಾಗತಿಸಿ ಜ.28ರಂದು ಬೆಳಗ್ಗೆ 10 ಗಂಟೆಯಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲು ನಿರ್ಧರಿಸಲಾಯಿತು.ನೋಡಲ್ ಅಧಿಕಾರಿ ಚಂದ್ರಕಾಂತ ಪವಾರ ಮಾತನಾಡಿ, ಪಟ್ಟಣದ ಪ್ರಮುಖ ವೃತ್ತಗಳಲ್ಲಿ ರಂಗೋಲಿಯಿಂದ ಶೃಂಗಾರ ಮಾಡಬೇಕು. ಮೆರವಣಿಗೆಯಲ್ಲಿ ಸಮೂಹ ನೃತ್ಯ ಮತ್ತು ಡೊಳ್ಳು ಕುಣಿತ ಇರಲಿದೆ. ರಥಯಾತ್ರೆ ಮೆರವಣಿಗೆ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು. ಪಟ್ಟಣದ ಎಲ್ಲಾ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಪಪಂ ಮುಖ್ಯಾಧಿಕಾರಿ ಎಲ್.ಡಿ. ಮುಲ್ಲಾ, ಪಿಎಸ್‌ಐ ಬಸವರಾಜ ತಿಪ್ಪರಡ್ಡಿ, ತಾಪಂ ಇಒ ಭಾರತಿ ಚೆಲುವಯ್ಯ, ಅಬಕಾರಿ ಇಲಾಖೆ ಅಧಿಕಾರಿಗಳಾದ ಆರತಿ ಖೈನೂರ, ಕಸಾಪ ತಾಲೂಕು ಘಟಕದ ಅಧ್ಯಕ್ಷ ಜಿ.ಪಿ.ಬಿರಾದಾರ, ಶಸಾಪ ತಾಲೂಕು ಘಟಕದ ಅಧ್ಯಕ್ಷ ಎಸ್.ಎನ್. ಬಸವರಡ್ಡಿ, ರಾವುತ ತಳಕೇರಿ, ಹುಯೋಗಿ ತಳ್ಳೋಳ್ಳಿ, ಪ್ರಕಾಶ ಗುಡಿಮನಿ, ರಾಜು ಸಿಂದಗೇರಿ, ವಿಠ್ಠಲ ಯಂಕಂಚಿ ಸೇರಿದಂತೆ ಕಂದಾಯ, ಪಪಂ, ಆಹಾರ , ಆರೋಗ್ಯ ಹಾಗೂ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.