14 ರಂದು ಹೊಸದುರ್ಗಕ್ಕೆ ಕನ್ನಡ ಜ್ಯೋತಿ ರಥಯಾತ್ರೆ

| Published : Jul 12 2024, 01:43 AM IST / Updated: Jul 12 2024, 10:35 AM IST

ಸಾರಾಂಶ

ಕರ್ನಾಟಕ ಸಂಭ್ರಮಾಚರಣೆ ಹಿನ್ನೆಲೆ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಧ್ಯೇಯ ವಾಕ್ಯದಡಿ ರಾಜ್ಯದ್ಯಂತ ಕನ್ನಡ ಜ್ಯೋತಿ ರಥವು ರಾಜ್ಯಾದ್ಯಂತ ಸಂಚರಿಸುತ್ತಿದೆ.

ಹೊಸದುರ್ಗ: ಕರ್ನಾಟಕ ಸಂಭ್ರಮಾಚರಣೆ ಹಿನ್ನೆಲೆ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಧ್ಯೇಯ ವಾಕ್ಯದಡಿ ರಾಜ್ಯದ್ಯಂತ ಕನ್ನಡ ಜ್ಯೋತಿ ರಥವು ರಾಜ್ಯಾದ್ಯಂತ ಸಂಚರಿಸುತ್ತಿದೆ. 

ಕನ್ನಡಿಗರು ಮತ್ತು ಕನ್ನಡಾಭಿಮಾನಿಗಳು ಒಂದುಗೂಡಿ ರಥ ಯಾತ್ರೆಯನ್ನು ಸಂಭ್ರಮದಿಂದ ಬರಮಾಡಿಕೊಳ್ಳೋಣ ಎಂದು ರಥಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್‌ ತಿರುಪತಿ ಪಾಟೀಲ್ ಹೇಳಿದರು.14ರ ಬೆಳಿಗ್ಗೆ ಹಿರಿಯೂರಿನಿಂದ ತಾಲೂಕಿನ ಲಕ್ಕಿಹಳ್ಳಿ ಬಸ್ ನಿಲ್ದಾಣಕ್ಕೆ ರಥ ಬರಲಿದೆ. ಬಳಿಕ ಮಾಡದಕೆರೆ ಮಾರ್ಗವಾಗಿ ಹೊಸದುರ್ಗಕ್ಕೆ ಕರೆತರಲಾಗುವುದು.

ಸಭೆಯಲ್ಲಿ ತಾ.ಪಂ. ಇಒ ಸುನಿಲ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು, ಕಸಾಪ ಅಧ್ಯಕ್ಷ ಓಂಕಾರಪ್ಪ, ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಲೋಕೇಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕಾಳಮ್ಮ, ಸಹಾಯಕ ಕೃಷಿ ನಿರ್ದೇಶಕ ಈಶ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಗಂಗಾಧರಪ್ಪ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಕನ್ನಡಪರ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು.