ಕೆ. ಬಾಡಗ ಗ್ರಾ. ಪಂ. ನಲ್ಲಿ ಶಾಸಕ ಪೊನ್ನಣ್ಣ ಸಭೆ: ಪಂಚಾಯಿತಿಯಿಂದ ಮನವಿ ಸಲ್ಲಿಕೆ

| Published : May 16 2025, 01:57 AM IST

ಕೆ. ಬಾಡಗ ಗ್ರಾ. ಪಂ. ನಲ್ಲಿ ಶಾಸಕ ಪೊನ್ನಣ್ಣ ಸಭೆ: ಪಂಚಾಯಿತಿಯಿಂದ ಮನವಿ ಸಲ್ಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಪೊನ್ನಂಪೇಟೆ ತಾಲೂಕು ವ್ಯಾಪ್ತಿಯ ಕೆ. ಬಾಡಗ ಗ್ರಾಮ ಪಂಚಾಯಿತಿಗೆ ಶಾಸಕ ಪೊನ್ನಣ್ಣ ಭೇಟಿ ನೀಡಿದರು.

ಕನ್ನಡಪ್ರಭ ವಾರ್ತೆ ಶ್ರೀಮಂಗಲ

ಪೊನ್ನಂಪೇಟೆ ತಾಲೂಕು ವ್ಯಾಪ್ತಿಯ ಕೆ. ಬಾಡಗ ಗ್ರಾಮ ಪಂಚಾಯಿತಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಭೇಟಿ ನೀಡಿದರು. ಶಾಸಕರಿಗೆ ಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ಪ್ರಮುಖರು ಮತ್ತು ಗ್ರಾಮಸ್ಥರು ತಮ್ಮ ಹಲವು ಅಭಿವೃದ್ಧಿ ಬೇಡಿಕೆಗಳನ್ನು ಶಾಸಕರ ಮುಂದಿಟ್ಟರು. ವಿಶೇಷವಾಗಿ ಕೆ. ಬಾಡಗ ಗ್ರಾಮ ಪಂಚಾಯಿತಿ ಈಗ ಕಾರ್ಯನಿರ್ವಹಿಸುತ್ತಿರುವ ಕಟ್ಟಡದ ಬದಲಾಗಿ, ಸೂಕ್ತ ನಿವೇಶನ ಗುರುತಿಸಿ ಅಥವಾ ಪರ‍್ಯಾಯ ಕಟ್ಟಡದ ವ್ಯವಸ್ಥೆ ಮಾಡಿಕೊಡಬೇಕೆಂದು ತಮ್ಮ ಪ್ರಮುಖ ಬೇಡಿಕೆಯನ್ನು ಶಾಸಕರಲ್ಲಿ ಕೇಳಿಕೊಂಡರು.

ಮನವಿಯನ್ನು ಸ್ವೀಕರಿಸಿದ ಶಾಸಕರು ಪರಿಶೀಲಿಸಿ ಅಗತ್ಯ ಕ್ರಮಕ್ಕೆ ಸೂಚಿಸುವುದಾಗಿ ತಿಳಿಸಿದರು. ಈ ಸಂದರ್ಭ ಗ್ರಾಮಸ್ಥರು ಕೂಡ ತಮ್ಮ ಮನವಿಯನ್ನು ಶಾಸಕರಿಗೆ ನೀಡಿದರು.

ಹಲವು ಬೇಡಿಕೆಗಳನ್ನು ಸ್ವೀಕರಿಸಿದ ಶಾಸಕರು ಎಲ್ಲವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ಕೆ ಬಾಡಗ ವಲಯ ಅಧ್ಯಕ್ಷರಾದ ಚಿಮ್ಮಣಮಾಡ ರವಿ, ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.