ಕೆ-ಸಿಇಟಿ: ಆಕಾಶ ಕಂಕಣವಾಡಿ ರಾಜ್ಯಕ್ಕೆ 8ನೇ ರ್‍ಯಾಂಕ್‌

| Published : Jun 03 2024, 12:32 AM IST

ಕೆ-ಸಿಇಟಿ: ಆಕಾಶ ಕಂಕಣವಾಡಿ ರಾಜ್ಯಕ್ಕೆ 8ನೇ ರ್‍ಯಾಂಕ್‌
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿ: 2024-25 ನೇ ಸಾಲಿನ ವಿವಿಧ ವೃತ್ತಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆ-ಸಿಇಟಿ)ಯಲ್ಲಿ ನಗರದ ಆಕಾಶ ಶ್ರೀಶೈಲ್ ಕಂಕಣವಾಡಿ ರಾಜ್ಯಕ್ಕೆ ಎಂಟನೇ ರ್‍ಯಾಂಕ್‌ ಪಡೆದುಕೊಂಡಿದ್ದಾರೆ.

ಮಂಗಳೂರಿನ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ಆಕಾಶ್, ಬೆಳಗಾವಿ ಜಿಲ್ಲೆಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ ಅವರ ಪುತ್ರನಾಗಿದ್ದಾರೆ. ನೀಟ್‌ನಲ್ಲೂ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿರುವ ಆಕಾಶ್, ಏಮ್ಸ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ ಗುರಿ ಹೊಂದಿದ್ದಾರೆ. ಈತನ ಸಾಧನೆಗೆ ಎಕ್ಸಪರ್ಟ್ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಮತ್ತು ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.