ಸಿಎಂ ಸಿದ್ದು ರಾಜೀನಾಮೆಗೆ ಕೆ.ಚಂದ್ರಾರೆಡ್ಡಿ ಆಗ್ರಹ

| Published : Jul 19 2024, 12:54 AM IST

ಸಾರಾಂಶ

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ವಾಲ್ಮೀಕಿ ನಿಗಮದಲ್ಲಿ ಮತ್ತು ಮುಡಾದಲ್ಲಿ ಕೋಟ್ಯಾಂತರ ರು.ಗಳ ಹಗರಣ ನಡೆಸಿರುವುದು ಬೆಳಕಿಗೆ ಬಂದಿರುವುದರಿಂದ ಕೂಡಲೇ ಸಿ.ಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಹಿರಿಯ ಮುಖಂಡ ಕೆ.ಚಂದ್ರಾರೆಡ್ಡಿ ಅವರು ಬಂಗಾರಪೇಟೆಯಲ್ಲಿ ಆಗ್ರಹಿಸಿದ್ದಾರೆ.

ಬಂಗಾರಪೇಟೆ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ವಾಲ್ಮೀಕಿ ನಿಗಮದಲ್ಲಿ ಮತ್ತು ಮುಡಾದಲ್ಲಿ ಕೋಟ್ಯಾಂತರ ರು.ಗಳ ಹಗರಣ ನಡೆಸಿರುವುದು ಬೆಳಕಿಗೆ ಬಂದಿರುವುದರಿಂದ ಈ ಕೂಡಲೇ ಸಿ.ಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಹಿರಿಯ ಮುಖಂಡ ಕೆ.ಚಂದ್ರಾರೆಡ್ಡಿ ಆಗ್ರಹಿಸಿದರು. ಬಿಜೆಪಿ ರಾಜಾದ್ಯಕ್ಷ ಬಿ.ವೈ.ವಿಜಯೇಂದ್ರರ ನೇತೃತ್ವದಲ್ಲಿ ವಾಲ್ಮೀಕಿ ನಿಗಮ ಮತ್ತು ಮುಡಾದಲ್ಲಿ ಕೋಟ್ಯಾಂತರ ರು.ಗಳ ಹಗರಣ ನಡೆಸಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧ ಮುತ್ತಿಗೆಗೆ ಬಂಗಾರಪೇಟೆ ಕ್ಷೇತ್ರದಿಂದ ಹೊರಟಿದ್ದ ವಾಹನಗಳಿಗೆ ಕೆ.ಸಿ.ಆರ್ ಕಚೇರಿ ಬಳಿ ಚಾಲನೆ ನೀಡಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಲವಾರು ಹಗರಣಗಳ ಮೂಲಕ ರಾಜ್ಯದ ಜನರ ಕೊಟ್ಯಾಂತರ ರು. ತೆರಿಗೆ ಹಣ ಗುಳುಂ ಮಾಡಿರುವ ಬಗ್ಗೆ ವರದಿಯಾಗುತ್ತಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಾಲ್ಮೀಕಿ ಹಗರಣದಲ್ಲಿ ಸಚಿವ ನಾಗೇಂದ್ರ ಭಾಗಿಯಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನೈತಿಕ ಹೊಣೆ ಹೊತ್ತು ಸಿ.ಎಂ.ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಮಾಜಿ ಶಾಸಕರಾದ ಬಿ.ಪಿ.ವೆಂಕಟಮುನಿಯಪ್ಪ, ಎಂ.ನಾರಾಯಣಸ್ವಾಮಿ, ಜಿಪಂ ಮಾಜಿ ಸದಸ್ಯ ಬಿ.ವಿ.ಮಹೇಶ್, ಬಿಜೆಪಿ ತಾಲೂಕು ಅಧ್ಯಕ್ಷ ಸಂಪಂಗಿರೆಡ್ಡಿ ಮತ್ತಿತರರಿದ್ದರು.