ಆರ್ಥಿಕ ಸಂಕಷ್ಟದಿಂದಾಗಿ ಅನೇಕ ಬಡ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣ ಪೂರ್ಣಗೊಳಿಸುವುದೇ ಕಷ್ಟವಾಗುತ್ತಿದೆ. ಇದರಿಂದ ಅವರು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.ಈ ವಿದ್ಯಾರ್ಥಿಗಳಿಗೆ ನೆರವು ನೀಡುವುದು ಸಮಾಜದ ಜವಾಬ್ದಾರಿಯಾಗಿದೆ.
ಕೆ.ಎಂ.ದೊಡ್ಡಿ:
ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಪ್ರದೇಶದ 16 ಬಡ ವಿದ್ಯಾರ್ಥಿಗಳಿಗೆ ಭಾರತೀ ಕಾಲೇಜು ವತಿಯಿಂದ 2025-26ನೇ ಸಾಲಿನಲ್ಲಿ ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ಆರ್ಥಿಕ ನೆರವು ನೀಡಲಾಯಿತು.ಭಾರತೀ ಎಜುಕೇಷನ್ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆಶಯ್ ಮಧು, ಬಡ ವಿದ್ಯಾರ್ಥಿಗಳಿಗೆ ನೆರವಿನ ಚೆಕ್‌ಗಳನ್ನು ವಿತರಿಸಿ ಮಾತನಾಡಿ, ಬಡವರು, ರೈತರು ಹಾಗೂ ಕಾರ್ಮಿಕರ ಮಕ್ಕಳಿಗೆ ಆರ್ಥಿಕ ನೆರವು ನೀಡುವ ಮೂಲಕ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಭಾರತೀ ಕಾಲೇಜು ಹಾಗೂ ಟ್ರಸ್ಟ್ ಬೆಂಬಲ ನೀಡುತ್ತಿದೆ ಎಂದರು.
ಆರ್ಥಿಕ ಸಂಕಷ್ಟದಿಂದಾಗಿ ಅನೇಕ ಬಡ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣ ಪೂರ್ಣಗೊಳಿಸುವುದೇ ಕಷ್ಟವಾಗುತ್ತಿದೆ. ಇದರಿಂದ ಅವರು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.ಈ ವಿದ್ಯಾರ್ಥಿಗಳಿಗೆ ನೆರವು ನೀಡುವುದು ಸಮಾಜದ ಜವಾಬ್ದಾರಿಯಾಗಿದೆ ಎಂದರು.ಶೈಕ್ಷಣಿಕ ನೆರವು ಪಡೆದ ವಿದ್ಯಾರ್ಥಿಗಳು ಈ ಹಣವನ್ನು ವಿದ್ಯಾಭ್ಯಾಸಕ್ಕೆ ಬಳಸಿಕೊಂಡು ಉತ್ತಮ ಶಿಕ್ಷಣ ಪಡೆದು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಭಾರತೀ ಕಾಲೇಜು ಪ್ರಾಂಶುಪಾಲ ಡಾ.ಎಂ.ಎಸ್.ಮಹದೇವಸ್ವಾಮಿ, ಅಧೀಕ್ಷಕ ರಾಜು, ಉಪನ್ಯಾಸಕಿ ಸರಿತಾ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಆರೋಗ್ಯ ಕೇಂದ್ರದಲ್ಲಿ ಹಲವರಿಗೆ ಬೀಳ್ಕೊಡುಗೆ ಸಮಾರಂಭ
ಮಂಡ್ಯ: ತಾಲೂಕಿನ ಹೆಮ್ಮಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವರ್ಗಾವಣೆಗೊಂಡ ಡಾ.ನಂದೀಶ್ ಹಾಗೂ ಫಾರ್ಮಸಿ ಅಧಿಕಾರಿ ಶ್ವೇತಾ ಹಾಗೂ ಪ್ರಯೋಗಶಾಲಾ ತಂತ್ರಜ್ಞರಾದ ಹುರ್ ಮಾತ್ ಫಾತಿಮಾ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.ಸಮಾರಂಭದಲ್ಲಿ ಡಾ.ಸಂಧ್ಯಾ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ತೇಜಶ್ರೀ ಹಾಗೂ ಆಸ್ಪತ್ರೆ ಎಲ್ಲಾ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.ಡಾ.ನಂದೀಶ್ ಇಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಸಾರ್ವಜನಿಕರ ಜೊತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದರು. ಸಿಬ್ಬಂದಿಯವರ ಜೊತೆ ಕೂಡ ಸಹೃದಯಿ ಆಗಿದ್ದರು. ಮದ್ದೂರು ತಾಲೂಕಿನ ವಳೆಗೆರೆದೊಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಹೊಂದಿರುವ ಅವರಿಗೆ ದೇವರು ಅವರಿಗೆ ಆಯಸ್ಸು ಆರೋಗ್ಯ ನೆಮ್ಮದಿ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸಿದರು.