ಸಾರಾಂಶ
- ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಕೆ.ಪ್ರಕಾಶ್, ಪ್ರ.ಕಾ. ಆರ್.ಬಸವರಾಜಗೆ ಅಭಿನಂದನೆ
-----ಕನ್ನಡಪ್ರಭವಾರ್ತೆ ಚಳ್ಳಕೆರೆ
ತಾಲೂಕಿನಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ಕ್ರಿಯಾಶೀಲವಾಗಿ ನಡೆಸುವ ದೃಷ್ಠಿಯಿಂದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆ ಮಾಡಿಲಾಗಿದೆ ಎಂದು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಿ.ಸುರೇಶ್ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿ, ತಾಲೂಕಿನ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ ತನ್ನ ಚಟುವಟಿಕೆಯನ್ನು ವಿಸ್ತರಿಸುವ ದೃಷ್ಟಿಯಿಂದ ಇತ್ತೀಚೆಗೆ ನೂತನ ಆಯ್ಕೆ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಭರಮಸಾಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಮುಖ್ಯ ಶಿಕ್ಷಕ ಕೆ.ಪ್ರಕಾಶ್, ಕೆಂಚವೀರನಹಳ್ಳಿ ಶಾಲೆಯ ಪದವೀಧರ ಮುಖ್ಯ ಶಿಕ್ಷಕ ಆರ್.ಬಸವರಾಜ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಯಿತು ಹಾಗೂ ಸಂಘದ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷ ಕೆ.ಪ್ರಕಾಶ್ ಮಾತನಾಡಿ, ಪದವೀಧರರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ನೇಮಿಸುವ ಮೂಲಕ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ. ತಾಲೂಕಿನ ಪದವೀಧರ ಮುಖ್ಯ ಶಿಕ್ಷಕರ ಸಮಸ್ಯೆಗಳ ಬಗ್ಗೆ ನಿರಂತರ ಹೋರಾಟ ನಡೆಸಲಾಗುವುದು. ಪ್ರತಿಯೊಂದು ಹಂತದಲ್ಲೂ ಸಂಘಟನೆಯ ಎಲ್ಲಾ ಸದಸ್ಯರನ್ನು ಗಣನೆಗೆ ತೆಗೆದುಕೊಂಡು ಕಾರ್ಯನಿರ್ವಹಿಸಲಾಗುವುದು. ವಿಶೇಷವಾಗಿ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು ಸೇರಿ ಅವಿರೋಧವಾಗಿ ಆಯ್ಕೆ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ.ಟಿ.ವೀರೇಶ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪಿ.ಮಹಂತಣ್ಣ, ಎನ್‌ಪಿಎಸ್ ಅಧ್ಯಕ್ಷ ಎಚ್.ಒ.ರಾಜಣ್ಣ, ಶಿಕ್ಷಕರಾದ ಮಂಜುನಾಥ, ಗುರುಸ್ವಾಮಿ, ಡಿ.ತಿಪ್ಪೇಸ್ವಾಮಿ, ರಫೀಕ್ ಭಾಷ, ತಿಪ್ಪೇಸ್ವಾಮಿ, ವೀರೇಂದ್ರ, ಹರೀಶ್‌ನಾಯ್ಕ, ಶಶಿಧರ, ವಿಜಯನಾಯ್ಕ, ಕುಮಾರ್, ಪುಟ್ಟಸ್ವಾಮಿ,ಅನಿಲ್‌ಕುಮಾರ್ ಮುಂತಾದವರು ಉಪಸ್ಥಿತರಿದ್ದರು.
----ಪೋಟೋ 5ಸಿಎಲ್‌ಕೆ1:
ಚಳ್ಳಕೆರೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಕೆ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಆರ್.ಬಸವರಾಜರನ್ನು ಅಭಿನಂದಿಸಲಾಯಿತು.