ಜನರ ಸುರಕ್ಷತೆ ಹಾಗೂ ಸಂಚಾರಕ್ಕೆ ಅನುಕೂಲವಾಗುವಂತೆ ರಾತ್ರಿ ವೇಳೆಯಲ್ಲೂ ಬೀದಿ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಫುಟ್‌ಪಾತ್‌ಗಳಲ್ಲಿ ವ್ಯಾಪಾರ ನಡೆಸುತ್ತಿರುವ ಅಂಗಡಿಗಳಿಗೆ ಭೇಟಿ ನೀಡಿ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಅಂಗಡಿ ಮಾಲೀಕರಿಗೆ ಸಲಹೆ.

ಕೆ.ಆರ್.ಪೇಟೆ:

ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಅವರು ಪಟ್ಟಣದಾದ್ಯಂತ ಗುರುವಾರ ರಾತ್ರಿ ಸಂಚರಿಸಿ ಪ್ರಮುಖ ರಸ್ತೆಗಳಲ್ಲಿನ ಮೂಲಸೌಕರ್ಯ ಹಾಗೂ ಸ್ವಚ್ಛತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ವೇಳೆ ಮುಖ್ಯ ರಸ್ತೆಗಳಲ್ಲಿರುವ ಬೀದಿ ದೀಪಗಳನ್ನು ವೀಕ್ಷಿಸಿದ ಶಾಸಕರು, ಕೆಟ್ಟು ಹೋಗಿರುವ ಬೀದಿ ದೀಪಗಳನ್ನು ತಕ್ಷಣ ದುರಸ್ತಿಪಡಿಸಿ ಸಾರ್ವಜನಿಕರಿಗೆ ಸಮರ್ಪಕ ಬೆಳಕಿನ ವ್ಯವಸ್ಥೆ ಕಲ್ಪಿಸುವಂತೆ ಪುರಸಭೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಜನರ ಸುರಕ್ಷತೆ ಹಾಗೂ ಸಂಚಾರಕ್ಕೆ ಅನುಕೂಲವಾಗುವಂತೆ ರಾತ್ರಿ ವೇಳೆಯಲ್ಲೂ ಬೀದಿ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಫುಟ್‌ಪಾತ್‌ಗಳಲ್ಲಿ ವ್ಯಾಪಾರ ನಡೆಸುತ್ತಿರುವ ಅಂಗಡಿಗಳಿಗೆ ಭೇಟಿ ನೀಡಿ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಅಂಗಡಿ ಮಾಲೀಕರಿಗೆ ಸಲಹೆ ನೀಡಿದರು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಅಶೋಕ್, ಪರಿಸರ ಇಂಜಿನಿಯರ್ ಪ್ರಿಯಾಂಕಾ, ಜೆಡಿಎಸ್ ಮುಖಂಡರಾದ ಪಿಕೆಜಿ ಮಹೇಶ್, ನಗರ ಅಧ್ಯಕ್ಷ ರವಿ, ವಿಶ್ವನಾಥ್, ಸಚಿನ್ ಕೃಷ್ಣ, ಮರೀಗೌಡ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಹಾಜರಿದ್ದರು.

ನಾಳೆ ವಿದ್ಯುತ್ ವ್ಯತ್ಯಯ

ಮಂಡ್ಯ:66/11 ಕೆ.ವಿ ವಿ.ಸಿ ಫಾರಂ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-01 ಮಾಚಹಳ್ಳಿ ಎನ್‌ವೈಜೆಎಫ್-09 ಹುಳ್ಳೆನಹಳ್ಳಿ ಎನ್‌ವೈಜೆ ಫೀಡರ್‌ಗಳ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.9ರ ಬೆಳಗ್ಗೆ 9.30ರಿಂದ ಸಂಜೆ 6.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿ,ಸಿ ಫಾರಂ ವಿದ್ಯುತ್ ವಿತರಣಾ ಕೇಂದ್ರದ ಎಫ್-01 ಮಾಚಹಳ್ಳಿ ಎನ್‌ವೈಜೆಎಫ್-09 ಹುಳ್ಳೆನಹಳ್ಳಿ ಎನ್‌ವೈಜೆ ಫೀಡರ್‌ ಪ್ರದೇಶಗಳಾದ ವಿ,ಸಿ ಫಾರಂ, ಟಿ.ಮಲ್ಲಿಗೆರೆ, ಮಾಡಚಾಕನಹಳ್ಳಿ, ಮಾಚಹಳ್ಳಿ, ಹಾಡ್ಯ, ಹುಳ್ಳೆನಹಳ್ಳಿ, ದೇವರಾಯಪಟ್ಟಣ, ಜಯಪುರ , ಹುಚ್ಚೇಗೌಡನಹಳ್ಳಿ, ಹುಲಿಕೆರೆ, ಹುಲಿಕೆರೆಕೊಪ್ಪಲು ಮತ್ತು ಕಮ್ಮಾನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಕೊತ್ತತ್ತಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆರ್.ಟಿ.ಚಂದ್ರಮೌಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ ವಿದ್ಯುತ್ ವ್ಯತ್ಯಯ

ಮಂಡ್ಯ: 220 ಸ್ವೀಕರಣಾ ಕೇಂದ್ರ ತೂಬಿನಕೆರೆಯಲ್ಲಿ 11ಕೆವಿ ಫೀಡರ್‌ಗಳ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 09 ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ತೂಬಿನಕೆರೆ ವಿದ್ಯುತ್ ವಿತರಣಾ ಕೇಂದ್ರಗಳಾದ ತೂಬಿನಕೆರೆ, ತೂಬಿನಕೆರೆ ಇಂಡಸ್ಟಿçಯಲ್ ಏರಿಯಾ, ಉರಮಾರಕಸಲಗೆರೆ, ಯಲಿಯೂರು, ಕಾಳೇನಹಳ್ಳಿ, ಎಲೆಚಾಕನಹಳ್ಳಿ, ರಾಗಿಮುದ್ದನಹಳ್ಳಿ, ಸುಂಡಹಳಿ, ಪೀಹಳ್ಳಿ, ಕೊಡಿಯಾಲ, ಆಲಗೂಡು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ವಿಭಾಗದ ಕಾರ್ಯನಿರ್ವಾಹಕ ಅಭಿಯಂತರಾದ ಎಸ್.ಅನಿತಾಬಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.