ಕೆ.ಎಸ್.ನರಸಿಂಹಸ್ವಾಮಿ ಅವರ ಸಾಹಿತ್ಯ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ: ಡಾ.ಕುಮಾರ

| Published : Apr 11 2025, 12:31 AM IST

ಕೆ.ಎಸ್.ನರಸಿಂಹಸ್ವಾಮಿ ಅವರ ಸಾಹಿತ್ಯ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ: ಡಾ.ಕುಮಾರ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಸ್ತುತ ಕೆ.ಎಸ್.ನರಸಿಂಹಸ್ವಾಮಿ ಅವರ ಮನೆಯು ಮಾರಾಟವಾಗಿದೆ. ಮನೆಯ ಮಾಲೀಕರು ಮನೆ ಬಿಟ್ಟುಕೊಡಲು ತಯಾರಾಗಿದ್ದು, ಮನೆಯ ಮಾಲೀಕರಿಗೆ ಪರ್ಯಾಯ ಸರ್ಕಾರಿ ಜಾಗ ನೀಡಿ ಕೆ.ಎಸ್.ನರಸಿಂಹಸ್ವಾಮಿ ಅವರ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೆಸರಿಗೆ ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಮಂಡ್ಯ

ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ನಮ್ಮ ಜಿಲ್ಲೆಯ ಕೆ.ಎಸ್ ನರಸಿಂಹಸ್ವಾಮಿ ಅವರು ಒಬ್ಬರು. ಅವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಎಸ್.ನರಸಿಂಹಸ್ವಾಮಿ ಸ್ಮಾರಕ ನಿರ್ಮಾಣ ಮಾಡುವ ಸಂಬಂಧ ಸಭೆಯ ಅಧ್ಯಕ್ಷತೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆ.ಎಸ್.ನರಸಿಂಹಸ್ವಾಮಿ ಅವರ ಸ್ಮಾರಕ ನಿರ್ಮಾಣದ ಕುರಿತು ರಾಜ್ಯ ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಸಭೆ ಆಯೋಜಿಸಿ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸುವಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದ್ದಾರೆ ಎಂದರು.

ಪ್ರಸ್ತುತ ಕೆ.ಎಸ್.ನರಸಿಂಹಸ್ವಾಮಿ ಅವರ ಮನೆಯು ಮಾರಾಟವಾಗಿದೆ. ಮನೆಯ ಮಾಲೀಕರು ಮನೆ ಬಿಟ್ಟುಕೊಡಲು ತಯಾರಾಗಿದ್ದು, ಮನೆಯ ಮಾಲೀಕರಿಗೆ ಪರ್ಯಾಯ ಸರ್ಕಾರಿ ಜಾಗ ನೀಡಿ ಕೆ.ಎಸ್.ನರಸಿಂಹಸ್ವಾಮಿ ಅವರ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೆಸರಿಗೆ ಮಾಡಲಾಗುವುದು ಎಂದರು.

ಕೆ.ಎಸ್. ನರಸಿಂಹಸ್ವಾಮಿ ಅವರ ಮನೆಯನ್ನು ಸ್ಮಾರಕವಾಗಿ ಪರಿವರ್ತಿಸಿ, ಅವರಿಗೆ ಸಂಬಂಧ ಪಟ್ಟ ಎಲ್ಲಾ ವಸ್ತುಗಳನ್ನು ಅಲ್ಲಿ ಶೇಖರಿಸಿ ಇಡಲಾಗುವುದು. ಕೆ.ಎಸ್ ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ಸ್ಮಾರಕ ನಿರ್ವಹಣೆ ಮತ್ತು ಜವಾಬ್ದಾರಿ ನೋಡಿಕೊಳ್ಳಲಾಗುವುದು ಎಂದರು.

ಕೆ.ಎಸ್. ನರಸಿಂಹಸ್ವಾಮಿ ಬಯಲು ರಂಗಮಂದಿರ ಸ್ಥಾಪನೆ:

ನರಸಿಂಹಸ್ವಾಮಿ ಅವರ ಹೆಸರಿನಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುವುದು, ಮೇಲುಕೋಟೆ ಸಮೀಪದಲ್ಲಿ ಇರುವ ಸೂಕ್ತ ಸರ್ಕಾರಿ ಜಾಗ ಗುರುತಿಸಿ ಅಲ್ಲಿ ಕೆ.ಎಸ್. ನರಸಿಂಹಸ್ವಾಮಿ ರವರ ಹೆಸರಿನಲ್ಲಿ ಬಯಲು ರಂಗಮಂದಿರ ಸ್ಥಾಪನೆ ಮಾಡಲಾಗುವುದು ಎಂದರು.

ಕಿಕ್ಕೇರಿ ಕೆರೆ ಅಭಿವೃದ್ಧಿ ಹಾಗೂ ಮರುನಾಮಕರಣ:

ಕಿಕ್ಕೇರಿ ಕೆರೆಯನ್ನು ಕೆ. ಎಸ್. ನರಸಿಂಹಸ್ವಾಮಿ ಸರೋವರವೆಂದು ಮರುನಾಮಕರಣ ಮಾಡಿ, ಕೆರೆಯಲ್ಲಿ ವಾಕಿಂಗ್ ಪಾರ್ಕ್, ದೀಪ ವ್ಯವಸ್ಥೆ ಹಾಗೂ ಮುಂತಾದ ಕ್ರಮಗಳ ಕುರಿತು ಡಿ.ಪಿ.ಆರ್ ಸಿದ್ಧಪಡಿಸಿ ನೀರಾವರಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದರು.

ಸ್ವಾಗತ ಕಮಾನು:

ಕೆ.ಎಸ್.ನರಸಿಂಹಸ್ವಾಮಿ ಅವರ ಸ್ಮಾರಕಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಇರುವ ಅನುದಾನ ಉಪಯೋಗಿಸಿಕೊಂಡು ಸ್ವಾಗತ ಕಮಾನು ನಿರ್ಮಾಣ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇಷ್ಟೆಲ್ಲಾ ಕಾರ್ಯಾಗಳನ್ನು ಅಧಿಕಾರಿಗಳು ಶ್ರೀಘ್ರವಾಗಿ ಮಾಡಿ ಮುಗಿಸಬೇಕು, ಇಲ್ಲವಾದಲ್ಲಿ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಡಿ.ವಿ ನಂದೀಶ್, ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಕಾವೇರಿ ನಿರಾವರಿ ನಿಮಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ. ಮಂಜುನಾಥ್, ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ್ ಸದಸ್ಯರಾದ ತಿಮ್ಮರಾಜು, ಶ್ರೀನಿವಾಸ್, ಡಾ.ಮೇಖಲಾ ವೆಂಕಟೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.