ಮರಿಯಾಲ ಮಠಕ್ಕೆ ಕೆ.ವಿವೇಕಾನಂದ ಭೇಟಿ

| Published : May 28 2024, 01:06 AM IST

ಸಾರಾಂಶ

ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಮರಿಯಾಲದ ಮಠಕ್ಕೆ ಭೇಟಿ ನೀಡಿ, ಶ್ರೀಮಠದ ಅಧ್ಯಕ್ಷ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮಿಗಳಿಂದ ಆಶೀರ್ವಾದ ಪಡೆದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಮರಿಯಾಲದ ಮಠಕ್ಕೆ ಭೇಟಿ ನೀಡಿ, ಶ್ರೀಮಠದ ಅಧ್ಯಕ್ಷ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮಿಗಳಿಂದ ಆಶೀರ್ವಾದ ಪಡೆದರು.

ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಹಾಗೂ ನಿಕಟಪೂರ್ವ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ. ನಿರಂಜನ್ ಮೂರ್ತಿ, ಡಾ.ಎ.ಆರ್.ಬಾಬು, ಜೆಡಿಎಸ್ ಮುಖಂಡ ಆಲೂರು ಮಲ್ಲು ಅನೇಕ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರೊಂದಿಗೆ ಮಠಕ್ಕೆ ತೆರಳಿ ಶ್ರೀಗಳಿಗೆ ಶಾಲು ಹೊದಿಸಿ, ಫಲತಾಂಬುಲನೀಡಿ ಆಶೀರ್ವಾದ ಪಡೆದುಕೊಂಡರು. ಚಾಮರಾಜನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಕೆ.ವಿವೇಕಾನಂದ ಶ್ರೀ ಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಶಿಕ್ಷಕರನ್ನು ಭೇಟಿ ಮಾಡಿ ನನಗೆ ಪ್ರಥಮ ಪ್ರಾಶಸ್ತ್ಯ ಮತ ನೀಡುವಂತೆ ಮನವಿ ಮಾಡಿದರು. ಇದಕ್ಕು ಮುನ್ನಾ ಶ್ರೀಮಠದಲ್ಲಿರುವ ಹಿರಿಯ ಶ್ರೀಗಳ ಗದ್ದುಗೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಶಿಕ್ಷಕರನ್ನುದ್ದೇಶಿಸಿ ಮಾತನಾಡಿದ ಕೆ.ವಿವೇಕಾನಂದ ಅವರು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಆಶೀರ್ವಾದ ಪಡೆದು ನಿಮ್ಮ ಬಳಿಗೆ ಬಂದಿದ್ದೇನೆ. ಶಿಕ್ಷಕರ ಶ್ರೇಯೋಬಿವೃದ್ದಿಗೆ ದುಡಿಯವ ಮೂಲಕ ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗೆ ನಾಲ್ಕು ಬಾರಿ ಅವಕಾಶ ಕೊಟ್ಟಿದ್ದೀರಿ. ನನಗೊಂದು ಬಾರಿ ಅವಕಾಶ ನೀಡಿ, ನಿಮ್ಮೆಲ್ಲರ ಸೇವಕನಾಗಿ ದುಡಿಯುತ್ತೇನೆ ಎಂದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ, ಉಪನ್ಯಾಸಕ ಅಶೋಕ ಮೊದಲಾದವರು ಇದ್ದರು.