ಸಾರಾಂಶ
ಕಬಡ್ಡಿ ಕ್ರೀಡೆ ಉಳಿಸಿ ಬೆಳೆಸಬೇಕು. ಕಬಡ್ಡಿ ಗ್ರಾಮೀಣ ಕ್ರೀಡೆಯಾಗಿದ್ದು, ದೇಶದ ರಾಷ್ಟ್ರೀಯತೆ ಮತ್ತು ಸಂಸ್ಕೃತಿ ಎತ್ತಿ ತೋರಿಸುತ್ತದೆ
ಯಲಬುರ್ಗಾ: ಯುವಕರನ್ನು ಸದೃಢವಾಗಿ ಸಿದ್ಧಗೊಳಿಸಲು ಗ್ರಾಮೀಣ ಭಾಗದಲ್ಲಿ ಕಬಡ್ಡಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಯುವ ಮುಖಂಡ ಶಶಿಧರ ನಾಯಕ ಹೇಳಿದರು.
ತಾಲೂಕಿನ ತರಲಕಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗರುಡ ಯುಥ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಕಬಡ್ಡಿ ಆಡುವುದರಿಂದ ಯುವಕರಿಗೆ ವ್ಯಾಯಾಮ ದೊರೆಯುತ್ತದೆ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ದೈಹಿಕ, ಮಾನಸಿಕವಾಗಿ ಸದೃಢರಾಗಬೇಕು. ಇದರಿಂದ ಉತ್ತಮ ಆರೋಗ್ಯ ಗಳಿಸಬಹುದು ಎಂದರು.ಶಿಕ್ಷಕ ಲೋಹಿತ್ ರಾಠೋಡ ಮಾತನಾಡಿ, ಕಬಡ್ಡಿ ಕ್ರೀಡೆ ಉಳಿಸಿ ಬೆಳೆಸಬೇಕು. ಕಬಡ್ಡಿ ಗ್ರಾಮೀಣ ಕ್ರೀಡೆಯಾಗಿದ್ದು, ದೇಶದ ರಾಷ್ಟ್ರೀಯತೆ ಮತ್ತು ಸಂಸ್ಕೃತಿ ಎತ್ತಿ ತೋರಿಸುತ್ತದೆ. ಕ್ರೀಡೆಯಲ್ಲಿ ಸೋಲು, ಗೆಲವು ಮುಖ್ಯವಲ್ಲ. ಕ್ರೀಡಾ ಸ್ಫೂರ್ತಿಯಿಂದ ಪಾಲ್ಗೊಳ್ಳುವುದು ಎಷ್ಟು ಮುಖ್ಯವೋ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡುವುದು ಅಷ್ಟೇ ಮುಖ್ಯ ಎಂದರು.
ಶಿಕ್ಷಕ ಲೋಕೇಶ ಲಮಾಣಿ ಮಾತನಾಡಿದರು. ಜನನಿ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ರಂಗನಾಥ ವಲ್ಮಕೊಂಡಿ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಸಿದ್ದು ಕೆಂಪಳ್ಳಿ, ಶ್ರೀಕಾಂತಗೌಡ ಮಾಲಿಪಾಟೀಲ್, ಯಂಕಪ್ಪ ರಾಠೋಡ್, ವೆಂಕೋಬ ನಾಯಕ, ಕೃಷ್ಣಪ್ಪ ಚವ್ಹಾಣ, ಹನುಮಂತಪ್ಪ, ಮೈಲಾರಿ, ಶ್ರೀಧರ ನಾಯಕ, ಶರಣಪ್ಪ ನಾಯಕ, ಶೇಖರಪ್ಪ ಬಡಗಿ, ಉಮೇಶ ರಾಠೋಡ, ನವಲಸ್ವಾಮಿ ರಾಠೋಡ, ಮಾರುತಿ ರಾಠೋಡ ಭಾಗವಹಿಸಿದ್ದರು.;Resize=(128,128))
;Resize=(128,128))