ಸಾರಾಂಶ
ಧಾರವಾಡ ತಾಲೂಕಿನ ನರೆಂದ್ರ ಗ್ರಾಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಾಯೋಜಿತ ಧಾರವಾಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಬಡ್ಡಿ ಪಂದ್ಯಾವಳಿ ನಡೆಯಿತು.
ಧಾರವಾಡ: ದೇಶಿ ಕ್ರೀಡೆಗಳಿಗೆ ಉತ್ತೇಜನ ನೀಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸು ಮಾಡುವ ಉದ್ದೇಶದಿಂದ ಸಂಸದರು ಹಾಗೂ ಕೇಂದ್ರ ಸಚಿವರೂ ಆದ ಪ್ರಹ್ಲಾದ್ ಜೋಶಿ ಅವರು ಕಬಡ್ಡಿ ಪಂದ್ಯಾವಳಿ ಆಯೋಜಿಸಿದ್ದಾರೆ ಎಂದು ಮಾಜಿ ಶಾಸಕಿ ಸೀಮಾ ಮಸೂತಿ ಹೇಳಿದರು.
ತಾಲೂಕಿನ ನರೆಂದ್ರ ಗ್ರಾಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಾಯೋಜಿತ ಧಾರವಾಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಬಡ್ಡಿ ಪಂದ್ಯಾವಳಿಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.ದೇಶಿ ಕ್ರೀಡೆ ಕಬಡ್ಡಿ ಪ್ರೋತ್ಸಾಹಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಕಬಡ್ಡಿ ಪಂದ್ಯಾವಳಿ ಆಯೋಜಿಸಿರುವುದು ಶ್ಲಾಘನೀಯ. ತಮ್ಮ ಲೋಕಸಭಾ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಪಂದ್ಯಾವಳಿ ನಡೆಸಲಾಗುತ್ತಿದೆ ಎಂದರು.
ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ಜಿಲ್ಲಾ ಮಟ್ಟದಲ್ಲಿ ಸೆಣಸುವ ಅವಕಾಶ ಸಿಗಲಿದೆ. ಗದ್ದಲಕ್ಕೆ ಅವಕಾಶ ನೀಡದೇ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದರು.ಟ್ರೋಫಿ ಅನಾವರಣಗೊಳಿಸಿದ ಮಾಜಿ ಶಾಸಕ ಅಮೃತ ದೇಸಾಯಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಅದ್ಧೂರಿಯಾಗಿ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ. ಪಂದ್ಯಾವಳಿ ಸಿದ್ಧತೆಗಾಗಿ ಕಳೆದ 15-20 ದಿನಗಳಿಂದ ಬಿಜೆಪಿ ಪಕ್ಷದ ಯುವ ಮೋರ್ಚಾ ಪದಾಧಿಕಾರಿಗಳು ಹಾಗೂ ನರೇಂದ್ರ ಗ್ರಾಮಸ್ಥರು ಸಾಕಷ್ಟು ಶ್ರಮಿಸಿದ್ದಾರೆ. ಪಂದ್ಯಾವಳಿಯನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದರು.
ಸಾನಿಧ್ಯ ವಹಿಸಿದ್ದ ನರೇಂದ್ರದ ಶ್ರೀ ಸಂಗಮೇಶ್ವರ ಸ್ವಾಮೀಜಿ, ಶ್ರೀ ಮಹಾಂತ ಸ್ವಾಮೀಜಿ ಪಂದ್ಯಾವಳಿಗೆ ಶುಭ ಹಾರೈಸಿದರು. ವೇದಿಕೆ ಮೇಲೆ ಶಂಕರ ಮುಗದ, ಶಂಕರ ಕೋಮಾರ ದೇಸಾಯಿ ಇದ್ದರು. ಇದೇ ಸಂದರ್ಭದಲ್ಲಿ ಕಬಡ್ಡಿ ಆಯೋಜನೆಗೆ ಜಾಗ ನೀಡಿದ ಬಸಪ್ಪ ತಿರ್ಲಾಪುರ ಹಾಗೂ ಶಿವಪ್ಪ ತಿರ್ಲಾಪುರ ಅವರನ್ನು ಸನ್ಮಾನಿಸಲಾಯಿತು.;Resize=(128,128))
;Resize=(128,128))
;Resize=(128,128))
;Resize=(128,128))