ಸಾರಾಂಶ
ಹೊಳೆಬೆಳ್ಳೂರು ಗ್ರಾಮದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಕ್ರಮವಾಗಿ ಎಚ್.ಜಿ.ಪ್ರವೀಣ್ ಕುಮಾರ್ ಮತ್ತು ಭೈರೇಶ್ ನಾಮಪತ್ರ ಸಲ್ಲಿಸಿದರು. ಇವರನ್ನು ಅಭಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಹಾಸನ ಸಹಕಾರ ಇಲಾಖೆಯ ಅಧಿಕಾರಿ ವಾಸಿಮ್ ಘೋಷಣೆ ಮಾಡಿದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಘೋಷಣೆ ಆಗುತ್ತಿದ್ದಂತೆ ಸಹಕಾರ ಸಂಘದ ನಿರ್ದೇಶಕರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಕನ್ನಡಪ್ರಭ ವಾರ್ತೆ ಆಲೂರು
ಹೊಳೆಬೆಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಹಾಸನ ಎಚ್.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್ ಬಣದ ಎಚ್.ಜಿ.ಪ್ರವೀಣ್ ಕುಮಾರ್ ಅಧ್ಯಕ್ಷರಾಗಿ ಹಾಗೂ ಭೈರೇಶ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.ಹೊಳೆಬೆಳ್ಳೂರು ಗ್ರಾಮದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಕ್ರಮವಾಗಿ ಎಚ್.ಜಿ.ಪ್ರವೀಣ್ ಕುಮಾರ್ ಮತ್ತು ಭೈರೇಶ್ ನಾಮಪತ್ರ ಸಲ್ಲಿಸಿದರು. ಇವರನ್ನು ಅಭಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಹಾಸನ ಸಹಕಾರ ಇಲಾಖೆಯ ಅಧಿಕಾರಿ ವಾಸಿಮ್ ಘೋಷಣೆ ಮಾಡಿದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಘೋಷಣೆ ಆಗುತ್ತಿದ್ದಂತೆ ಸಹಕಾರ ಸಂಘದ ನಿರ್ದೇಶಕರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಹಾಸನ ಜಿಲ್ಲಾ ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್ ಮಾತನಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಸಂದರ್ಭದಲ್ಲಿ ಜಿದ್ದಾಜಿದ್ದಿನ ಸಂಘಗಳಿಗೆ ಅವಕಾಶ ನೀಡದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವಿರೋಧವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಎಲ್ಲರೂ ಪಕ್ಷಾತೀತವಾಗಿ ಕೈಜೋಡಿಸಿದಾಗ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ. ಅವಿರೋಧವಾಗಿ ಆಯ್ಕೆ ಮಾಡುವುದರಿಂದ ಸುಸೂತ್ರವಾಗಿ ಸೊಸೈಟಿ ಕಾರ್ಯನಿರ್ವಹಿಸುವುದರ ಜೊತೆಗೆ ಅಭಿವೃದ್ಧಿ ಹೊಂದಲಿದೆ ಎಂದರು.ಈ ಸಂದರ್ಭದಲ್ಲಿ ಹೊಳೆಬೆಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ವೇಣುಗೋಪಾಲ್ ಸೇರಿದಂತೆ ನೂತನ ನಿರ್ದೇಶಕರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಹಾಜರಿದ್ದರು.