ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ ಅಧಿಕಾರ ಸ್ವೀಕಾರ

| Published : Mar 05 2024, 01:42 AM IST

ಸಾರಾಂಶ

ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಸೋಮವಾರ ಮೈಸೂರಿನ ಕಾಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಸೋಮವಾರ ಮೈಸೂರಿನ ಕಾಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಮಧ್ಯಾಹ್ನ ೧೨.೧೫ ಕ್ಕೆ ಕಚೇರಿ ಪ್ರವೇಶ ಮಾಡಿದ ನೂತನ ಅಧ್ಯಕ್ಷರು ಕಚೇರಿಯ ಕಡತಕ್ಕೆ ಸಹಿ ಹಾಕಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಶಾಸಕ ಎ.ಆರ್. ಕೃಷ್ಣಮೂರ್ತಿ, ಎಚ್. ಎಂ. ಗಣೇಶ ಪ್ರಸಾದ್, ದರ್ಶನ್ ಧ್ರುವನಾರಾಯಣ್, ಡಾ.ತಿಮ್ಮಯ್ಯ, ಮಾಜಿ ಶಾಸಕರಾದ ಎಸ್. ಜಯಣ್ಣ, ನರೇಂದ್ರ, ಕಳಲೆ ಕೇಶವಮೂರ್ತಿ, ಜಿ.ಎನ್. ನಂಜುಂಡಸ್ವಾಮಿ ಹಾಗೂ ಅನೇಕ ಮುಖಂಡರು ಭಾಗವಹಿಸಿ ಶುಭ ಕೋರಿದರು.

ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಪಿ. ಮರಿಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನನ್ನ ಸೇವೆಯನ್ನು ಗುರುತಿಸಿ ಕಾಡಾ ಅಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ. ನನ್ನ ಹೆಸರನ್ನು ಶಿಫಾರಸ್ಸು ಮಾಡಿದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರು, ಎಲ್ಲಾ ಶಾಸಕರು, ಮಾಜಿ ಶಾಸಕರು, ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ. ಅವರಿಗೆ ಈ ಮುಖಾಂತರ ಕೃತಜ್ಞತೆಯನ್ನು ಸಲ್ಲಿಸುವುದಾಗಿ ತಿಳಿಸಿದರು.

ರೈತರ ಅಭಿವೃದ್ದಿಗೆ ಒತ್ತು: ರಾಜ್ಯ ಸರ್ಕಾರದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಅವರ ಸೂಚನೆ ಮತ್ತು ಸರ್ಕಾರ ಆದೇಶದಂತೆ ಕಾಡಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರ ಅಭಿವೃದ್ದಿಗಾಗಿ ಅನೇಕ ಯೋಜನೆಗಳು ಹಾಗೂ ಸವಲತ್ತು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ನಾಡಿಗೆ ಉತ್ತಮ ಮಳೆ ಬೆಳೆಯಾಗಿ ಸಮಸ್ತ ರೈತರು ಸುಖ ಶಾಂತಿ ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ. ನಾಡು ಸುಭೀಕ್ಷೆಯಿಂದ ಕೂಡಿರಲಿ ಎಂದು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಅಧಿಕಾರ ವಹಿಸಿಕೊಂಡಿದ್ದು, ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯಲ್ಲಿರುವ ರೈತರ ಅಭಿವೃದ್ದಿಗಾಗಿ ಹೆಚ್ಚಿನ ಒತ್ತು ಹಾಗೂ ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ದಿ ಮತ್ತು ನಾಲೆ ಹಾಗೂ ಸಂಪರ್ಕ ರಸ್ತೆಗಳ ಅಭಿವೃದ್ದಿಪಡಿಸಿ, ಸರ್ಕಾರ ಜನಪರ ಯೋಜನೆಗಳನ್ನು ತಲುಪಿಸುವುದಾಗಿ ಮರಿಸ್ವಾಮಿ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಎಂ. ಶಿವಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಡಾ. ಪುಷ್ಪ ಅಮರನಾಥ್, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮೂರ್ತಿ, ಚಾ.ನಗರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ರಾಜ್ಯ ಕಾರ್ಯದರ್ಶಿ ಎಚ್.ಸಿ. ಬಸವರಾಜು, ಜಿ.ಪಂ. ಮಾಜಿ ಸದಸ್ಯರಾದ ಸದಾಶಿವಮೂರ್ತಿ, ಬಸವರಾಜು, ಕೊಪ್ಪಾಳಿ ಮಹದೇವನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ್,ಆರ್. ಮಹದೇವ್, ಬ್ಲಾಕ್ ಅಧ್ಯಕ್ಷರಾದ ಎ.ಎಸ್. ಗುರುಸ್ವಾಮಿ, ಮುನ್ನಾ, ತೋಟೇಶ್, ಹೊಂಗನೂರು ಚಂದ್ರು, ರಾಜಶೇಖರ್, ಮುನಿರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಶಿವಸ್ವಾಮಿ, ಪಿ.ರಾಜಣ್ಣ, ಶೇಖರ್ ಮೊದಲಾದವರು ಇದ್ದರು. ಮೈಸೂರಿನ ಕಾಡಾ ಅಧ್ಯಕ್ಷರಾಗಿ ಮೈಸೂರಿನ ಕಾಡಾ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಪಿ.ಮರಿಸ್ವಾಮಿ ಅವರನ್ನು ನಂಜೇದೇವನಪುರ ಗ್ರಾಮಸ್ಥರ ಪರವಾಗಿ ಭಾರಿ ಗಾತ್ರದ ಹಾರ ಹಾಕಿ ಶಾಲು ಹೊದಿಸಿ, ಸಿಹಿ ನೀಡಿ ಅಭಿನಂದಿಸಿ, ಸಂಭ್ರಮ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಪಿಎಂಸಿ ಮಾಜಿ ಅಧ್ಯಕ್ಷ ಪಿ.ಮರಿಸ್ವಾಮಿ, ನಂಜೇದೇವನಪುರ ಗ್ರಾಮದಲ್ಲಿ ಕೃಷಿಕರ ಕುಟುಂಬದಲ್ಲಿ ಹುಟ್ಟಿದ ಮರಿಸ್ವಾಮಿ ಅವರು ಕಾಡಾ ಅಧ್ಯಕ್ಷರಾಗಿರುವುದು ನಮ್ಮೆಲ್ಲರ ಹೆಮ್ಮೆ. ಅವರ ಮನೆ ದೇವರು ನಂಜುಂಡೇಶ್ವರ ಸ್ವಾಮಿ ಹಾಗೂ ಗ್ರಾಮ ದೇವತೆ ಮಾರಮ್ಮ ಇನ್ನು ಹೆಚ್ಚಿನ ಅಧಿಕಾರವನ್ನು ನೀಡಲಿ ಎಂದು ಆಶಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ರಾಜೇಂದ್ರಸ್ವಾಮೀಜಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಿ. ರಾಜಣ್ಣ, ಗ್ರಾ.ಪಂ. ಅಧ್ಯಕ್ಷ ಪಿ. ಶೇಖರ್. ಉಪಾಧ್ಯಕ್ಷ ಗುರುಮಲ್ಲಪ್ಪ, ಮಾಜಿ ಸದಸ್ಯ ಎನ್.ಎಂ. ಮಹೇಶ್, ರಂಗಭೂಮಿ ಕಲಾವಿದ ಎನ್.ಆರ್. ಪುರುಷೊತ್ತಮ್, ರಾಜೇಶ್, ಬೆಳ್ಳಿ ಮಾದಪ್ಪ, ಎಸ್. ಮಾದಪ್ಪ, ಸುನೀಲ್, ಎನ್.ಜೆ. ಬಸವರಾಜು ಸೇರಿದಂತೆ ಅನೇಕರು ಇದ್ದರು.