ಕಳೆದ ನಾಲ್ಕು ವರ್ಷಗಳ ಹಿಂದೆ ಉದಯಯಾನ ಮೂಲಕ ಬಡ ಕುಟುಂಬಗಳಿಗೆ ಅಗತ್ಯ ಕಿಟ್ ವಿತರಿಸಿ ಆರ್ಥಿಕ ನೆರವು ನೀಡುವ ಮೂಲಕ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲಾಗಿತ್ತು. ಅದೇ ರೀತಿ ಮುಂದಿನ ದಿನಗಳಲ್ಲಿಯೂ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಮೂಲಕ ಬಡ ಕುಟುಂಬಗಳ ನೆರವಿಗೆ ಸದಾ ಮುಂದಾಗಲಾಗುವುದು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಬಡವರು, ಕೂಲಿ ಕಾರ್ಮಿಕರು ಹಾಗೂ ಸಂಕಷ್ಟದಲ್ಲಿರುವ ಕುಟುಂಬಗಳ ನೆರವಿಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್, ತಾಲೂಕು ಹಾಗೂ ಭಾರತೀನಗರ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಸಮಿತಿಯಿಂದ ಆಯೋಜಿಸಿದ್ದ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ, ನೋಂದಣಿ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಳೆದ ನಾಲ್ಕು ವರ್ಷಗಳ ಹಿಂದೆ ಉದಯಯಾನ ಮೂಲಕ ಬಡ ಕುಟುಂಬಗಳಿಗೆ ಅಗತ್ಯ ಕಿಟ್ ವಿತರಿಸಿ ಆರ್ಥಿಕ ನೆರವು ನೀಡುವ ಮೂಲಕ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲಾಗಿತ್ತು. ಅದೇ ರೀತಿ ಮುಂದಿನ ದಿನಗಳಲ್ಲಿಯೂ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಮೂಲಕ ಬಡವರು, ಕೂಲಿ ಕಾರ್ಮಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ನೆರವಿಗೆ ಸದಾ ಮುಂದಾಗಲಾಗುವುದು ಎಂದು ಭರವಸೆ ನೀಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 138 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ವಿವಿಧ ಯೋಜನೆಗಳ ಮೂಲಕ ಕಾರ್ಮಿಕರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರಿಗೆ ನೆರವು ನೀಡುತ್ತಿದೆ ಎಂದರು.

ಯಾವುದೇ ಜಾತಿ, ಧರ್ಮದ ಭೇದವಿಲ್ಲದೆ ರೈತರು, ಮಹಿಳೆಯರು, ಕಾರ್ಮಿಕರು ಹಾಗೂ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಲು ಅಗತ್ಯ ನೋಂದಣಿ ಮಾಡಿಸಿಕೊಳ್ಳಬೇಕು. ಸ್ಮಾರ್ಟ್ ಕಾರ್ಡ್ ಗಳ ಮೂಲಕ ಲಭ್ಯವಿರುವ ಸೌಲಭ್ಯಗಳ ಕುರಿತು ಅರಿವು ಹೊಂದಿ, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ನವೀನ್ ಕುಮಾರ್, ರಾಜ್ಯ ಜಂಟಿ ಕಾರ್ಯದರ್ಶಿ ಮಹಮದ್ ಫಾರೂಕ್, ನಿವೃತ್ತ ಯೋಧ ಸಿಪಾಯಿ ಶ್ರೀನಿವಾಸ್, ಟಿಎಪಿಸಿಎಂಎಸ್ ನಿರ್ದೇಶಕ ಗೊರವನಹಳ್ಳಿ ರಾಘು, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ರಾಮಕೃಷ್ಣ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವಸಂತಮ್ಮ ಭಾರತೀನಗರ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ಘಟಕದ ಚಂದ್ರಶೇಖರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ, ಕಾರ್ಯಕ್ರಮದ ಆಯೋಜಕರಾದ ಮುಡೀನಹಳ್ಳಿ ತಿಮ್ಮಯ್ಯ, ರಾಮಣ್ಣ, ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.