ದೇಗುಲದ ಪುನರ್ ಪ್ರತಿಷ್ಠಾಪನೆ ವೇಳೆ ಕಾಡಾನೆ ದಾಂದಲೆ‌

| Published : May 10 2025, 01:10 AM IST

ದೇಗುಲದ ಪುನರ್ ಪ್ರತಿಷ್ಠಾಪನೆ ವೇಳೆ ಕಾಡಾನೆ ದಾಂದಲೆ‌
Share this Article
  • FB
  • TW
  • Linkdin
  • Email

ಸಾರಾಂಶ

ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಮುಂಜಾನೆಯಿಂದ ಆರಂಭವಾದ ಕೋಟೆದ ಬಬ್ಬುಸ್ವಾಮಿ, ಚಾಮುಂಡೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವಿಜೃಂಭಣೆಯ ಚಾಲನೆ ದೊರೆತ್ತಿದ್ದು ಬೆಳಿಗ್ಗಿನಿಂದಲೇ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ಮುಂದುವರಿಯುತ್ತಿದ್ದಂತೆ ಗುರುವಾರ ರಾತ್ರಿ ಸುಮಾರು 9.30 ರ ಸಮಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಕಣ್ಮರೆಯಾಗಿದ್ದ ಮೂರ್ನಾಲ್ಕು ಕಾಡಾನೆಗಳು ಏಕಾಏಕಿ ಪ್ರತ್ಯಕ್ಷವಾಗಿದ್ದು ಭಕ್ತ ಸಮೂಹ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಕಾಡಾನೆಗಳನ್ನು ನೋಡಲು ಮುಗಿಬಿದ್ದ ಸನ್ನಿವೇಶ ನಿರ್ಮಾಣವಾಗಿತ್ತು.

ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಮುಂಜಾನೆಯಿಂದ ಆರಂಭವಾದ ಕೋಟೆದ ಬಬ್ಬುಸ್ವಾಮಿ, ಚಾಮುಂಡೇಶ್ವರಿ ಹಾಗೂ ಪರಿವಾರ ದೈವಗಳ ದೈವಸ್ಥಾನ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವಿಜೃಂಭಣೆಯ ಚಾಲನೆ ದೊರೆತ್ತಿದ್ದು ಬೆಳಿಗ್ಗಿನಿಂದಲೇ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ಮುಂದುವರಿಯುತ್ತಿದ್ದಂತೆ ಗುರುವಾರ ರಾತ್ರಿ ಸುಮಾರು 9.30 ರ ಸಮಯದಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಕಣ್ಮರೆಯಾಗಿದ್ದ ಮೂರ್ನಾಲ್ಕು ಕಾಡಾನೆಗಳು ಏಕಾಏಕಿ ಪ್ರತ್ಯಕ್ಷವಾಗಿದ್ದು ಭಕ್ತ ಸಮೂಹ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಕಾಡಾನೆಗಳನ್ನು ನೋಡಲು ಮುಗಿಬಿದ್ದ ಸನ್ನಿವೇಶ ನಿರ್ಮಾಣವಾಗಿತ್ತು.

ಭಕ್ತ ಸಮೂಹ ಕಾಡಾನೆಗಳನ್ನು ನೋಡಲು ಮುಗಿಬೀಳುತ್ತಿದ್ದಂತೆ ರೊಚ್ಚಿಗೆದ್ದ ಕಾಡಾನೆಗಳು ರಸ್ತೆಯ ಬದಿಯಲ್ಲಿ ಸುತ್ತುವರೆಯುತ್ತಿತ್ತು, ಇದಾದ ಬಳಿಕ ದೈವಸ್ಥಾನ ಆಡಳಿತ ಮಂಡಳಿ ಭಕ್ತರನ್ನು ನಿಯಂತ್ರಿಸಿಕೊಳ್ಳಲು ಪಟಾಕಿ ಸಿಡಿಸಿದರು. ನಂತರ ಮಾಹಿತಿ ಪಡೆದ ಅರಣ್ಯ ಇಲಾಖೆ, ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಭಕ್ತ ಸಮೂಹವನ್ನು ನಿಯಂತ್ರಿಸಿಕೊಳ್ಳಲು ಹರಸಾಹಸ ಪಟ್ಟು ಕಾಡಾನೆಗಳಿಗೆ ರಸ್ತೆ ದಾಟಲು ಅವಕಾಶ ಕಲ್ಪಿಸಿದರು. ದೈವಸ್ಥಾನದಲ್ಲಿ ನೆರೆದಿದ್ದ ಭಕ್ತರ ಕಿರುಚಾಟಕ್ಕೆ ರೊಚ್ಚಿಗೆದ್ದ ಒಂಟಿ ಕಾಡಾನೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಗಳ ಮೇಲೆ ದಾಳಿಮಾಡಿರುವ ದೃಶ್ಯ ಇದೀಗ ಮೋಬೈಲ್ ನಲ್ಲಿ ಸೆರೆಯಾಗಿದೆ. ತನ್ನ ಪಾಡಿಗೆ ರಸ್ತೆ ದಾಟುತ್ತಿದ್ದ ಕಾಡನೆಗಳಿಗೆ ಅಡಚಣೆ ಮಾಡಿದ್ದೆ ಇಷ್ಟೆಲ್ಲಾ ಅನಾಹುತಗಳಿಗೆ ಕಾರಣ ಎನ್ನಲಾಗುತ್ತಿದೆ.