ಸಾರಾಂಶ
ಬಾದಾಮಿ: ಮಾ.31 ರಿಂದ ಏ.3ರ ವರೆಗೆ ಬಿಹಾರ ರಾಜ್ಯದ ಪಾಟ್ನಾದಲ್ಲಿ ನಡೆಯುತ್ತಿರುವ 33ನೇ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕಿಯರ ಕಬಡ್ಡಿ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯದಿಂದ ತಾಲೂಕಿನ ಕಾಡರಕೊಪ್ಪ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಾದ ಸೌಜನ್ಯ ಆಲೂರ ಹಾಗೂ ಸರಸ್ವತಿ ಉದುಪುಡಿ ಕಬಡ್ಡಿ ಭಾಗವಹಿಸಲಿದ್ದಾರೆ.
ಬಾದಾಮಿ: ಮಾ.31 ರಿಂದ ಏ.3ರ ವರೆಗೆ ಬಿಹಾರ ರಾಜ್ಯದ ಪಾಟ್ನಾದಲ್ಲಿ ನಡೆಯುತ್ತಿರುವ 33ನೇ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕಿಯರ ಕಬಡ್ಡಿ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯದಿಂದ ತಾಲೂಕಿನ ಕಾಡರಕೊಪ್ಪ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಾದ ಸೌಜನ್ಯ ಆಲೂರ ಹಾಗೂ ಸರಸ್ವತಿ ಉದುಪುಡಿ ಕಬಡ್ಡಿ ಭಾಗವಹಿಸಲಿದ್ದಾರೆ. ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ವಿದ್ಯಾರ್ಥಿನಿಯರನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ. ನಂದನೂರ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೈ. ಕುಂದರಗಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನವರ, ತಾಲೂಕು ದೈಹಿಕ ಪರಿವೀಕ್ಷಕರು ಬಿ.ಎಚ್. ಹಳಗೇರಿ, ಶಿಕ್ಷಣ ಸಂಯೋಜಕರು, ಸಮೂಹ ಸಂಪನ್ಮೂಲ ವ್ಯಕ್ತಿಗಳು, ಕಾಡರಕೊಪ್ಪ ಶಾಲೆಯ ಮುಖ್ಯ ಗುರುಗಳು ಹಾಗೂ ಶಾಲೆಯ ಎಲ್ಲ ಶಿಕ್ಷಕ ಸಿಬ್ಬಂದಿ ವರ್ಗದವರು ಹಾಗೂ ಕಾಡರಕೊಪ್ಪ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))