ರಜೆ ಪಡೆಯದ ರಾಜ ಹಾಸ್ಯಗಾರ ವಳಕುಂಜಗೆ ಕದ್ರಿ ವಿಷ್ಣು ಪ್ರಶಸ್ತಿ ಪ್ರದಾನ

| Published : Nov 20 2025, 01:45 AM IST

ರಜೆ ಪಡೆಯದ ರಾಜ ಹಾಸ್ಯಗಾರ ವಳಕುಂಜಗೆ ಕದ್ರಿ ವಿಷ್ಣು ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ಕದ್ರಿ ದೇವಸ್ಥಾನದ ಅಂಗಣದಲ್ಲಿ ಕಟೀಲು ಮೇಳದ ಸೇವೆ ಬಯಲಾಟ ನಡೆಸಿಕೊಂಡು ಬರುತ್ತಿರುವ ಕದ್ರಿ ಯಕ್ಷ ಬಳಗವು ಕೊಡಮಾಡುವ ಪ್ರಶಸ್ತಿಯನ್ನು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಲಕ್ಷ್ಮೀ ನಾರಾಯಣ ಆಸ್ರಣ್ಣ ಅವರು ಪ್ರದಾನ ಮಾಡಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

27 ವರ್ಷಗಳ ಶ್ರೀ ಕಟೀಲು ಮೇಳದ ತಿರುಗಾಟದಲ್ಲಿ 19 ವರ್ಷ ಒಂದೇ ಒಂದು ರಜೆ ಪಡೆಯದೆ ದಾಖಲೆ ಮಾಡಿರುವ, ತೆಂಕುತಿಟ್ಟಿನ ಪ್ರಾತಿನಿಧಿಕ ಯಕ್ಷಗಾನ ರಾಜ ಹಾಸ್ಯಗಾರ ರವಿಶಂಕರ್ ವಳಕುಂಜ ಅವರಿಗೆ ‘ಕದ್ರಿ ವಿಷ್ಣು ಪ್ರಶಸ್ತಿ -2025’ ನೀಡಿ ಗೌರವಿಸಲಾಯಿತು.

ಕದ್ರಿ ದೇವಸ್ಥಾನದ ಅಂಗಣದಲ್ಲಿ ಕಟೀಲು ಮೇಳದ ಸೇವೆ ಬಯಲಾಟ ನಡೆಸಿಕೊಂಡು ಬರುತ್ತಿರುವ ಕದ್ರಿ ಯಕ್ಷ ಬಳಗವು ಕೊಡಮಾಡುವ ಪ್ರಶಸ್ತಿಯನ್ನು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಲಕ್ಷ್ಮೀ ನಾರಾಯಣ ಆಸ್ರಣ್ಣ ಅವರು ಪ್ರದಾನ ಮಾಡಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಎ.ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೈದ್ಯ ಡಾ. ಜಯಶಂಕರ್ ಮಾರ್ಲ, ಲೀಲಾಕ್ಷ ಬಿ. ಕರ್ಕೇರ, ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಸಿ.ಎಸ್. ಭಂಡಾರಿ, ರವೀಂದ್ರನಾಥ್ ಶೆಟ್ಟಿ, ರವೀಂದ್ರ ಶೇಟ್, ಸುಣ್ಣoಬಳ ವಿಶ್ವೇಶ್ವರ ಭಟ್, ಜಯಶೀಲ ಅಡ್ಯಂತಾಯ, ಮೂಲ್ಕಿ ಕರುಣಾಕರ ಶೆಟ್ಟಿ, ದಿವಾಕರ ಶೆಟ್ಟಿ ಪರಾರಿ ಗುತ್ತು ಮುಖ್ಯ ಅತಿಥಿಗಳಾಗಿದ್ದರು. ಕದ್ರಿ ನವನೀತ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು.

ಕದ್ರಿ ಯಕ್ಷ ಬಳಗದ ಗೌರವ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ತಾರಾನಾಥ ಶೆಟ್ಟಿ ಬೋಳಾರ, ಶಿವ ಪ್ರಸಾದ್ ಪ್ರಭು, ಎಲ್ಲೂರು ರಾಮಚಂದ್ರ ಭಟ್, ಸುಧಾಕರ್ ಶೆಟ್ಟಿ ದೋಣಿಂಜೆ ಗುತ್ತು, ಕೃಷ್ಣ ಶೆಟ್ಟಿ ತಾರೆಮಾರ್, ಹರೀಶ್ ಕುಮಾರ್, ನಿವೇದಿತಾ ಎನ್. ಶೆಟ್ಟಿ, ಬೆಟ್ಟಂಪಾಡಿ ಸುಂದರ ಶೆಟ್ಟಿ, ಮಧುಸೂದನ ಅಲೆವೂರಾಯ ಇದ್ದರು.

ಪ್ರಧಾನ ಕಾರ್ಯದರ್ಶಿ ಪ್ರದೀಪ್ ಆಳ್ವ ಕದ್ರಿ ಸನ್ಮಾನ ಪತ್ರ ವಾಚಿಸಿದರು. ಕಾರ್ಯಾಧ್ಯಕ್ಷ ಪುರುಷೋತ್ತಮ ಭಂಡಾರಿ ಅಡ್ಯಾರ್ ನಿರೂಪಿಸಿದರು. ಸುಧಾಕರ ರಾವ್ ಪೇಜಾವರ ವಂದಿಸಿದರು.

ಕಟೀಲು ಮೇಳದವರಿಂದ ‘ದಶಾವತಾರ’ ಯಕ್ಷಗಾನ ಬಯಲಾಟ ಜರಗಿತು.