ಸಾರಾಂಶ
ಅತ್ಯಧಿಕ ಮತಗಳನ್ನು ನೀಡಿದ ಮತದಾರ
ಕನ್ನಡಪ್ರಭ ವಾರ್ತೆ, ಕೊಪ್ಪಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರದಿಂದ ಗೆಲ್ಲಬಹುದು ಎಂದು ಕಾಂಗ್ರೆಸ್ ಊಹಿಸಿತ್ತು. ಆದರೇ, ಮತದಾರರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಅತ್ಯಧಿಕ ಮತಗಳನ್ನು ನೀಡುವ ಮೂಲಕ ಮತ್ತೆ ದೇಶಭಕ್ತಿಯನ್ನು ಗೆಲ್ಲಿಸಿದ್ದಾರೆ ಎಂದು ಜೆಡಿಎಸ್‌ನ ಹಿರಿಯ ರಾಜ್ಯ ಉಪಾಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಹೇಳಿದರು.
ಮಂಗಳವಾರ ಚುನಾವಣಾ ಫಲಿತಾಂಶ ಬರುತ್ತಿದ್ದಂತೆ ಪಟ್ಟಣದ ಜೆಡಿಎಸ್ ಕಚೇರಿಯ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಲಂಚದ ರೂಪದಲ್ಲಿ ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿಯನ್ನು ಜನ ತಿರಸ್ಕರಿಸಿ ದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿ ತಲುಪಿದೆ. ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರು, ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದ ಪರಿಣಾಮ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ೨೫ ಸಾವಿರ ಮುನ್ನಡೆ ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದರು. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ನಮ್ಮ ಪಕ್ಷದ ಮುಖಂಡರಾದ ಎಚ್.ಡಿ.ಕುಮಾರಸ್ವಾಮಿಯವರು ಭರ್ಜರಿ ಗೆಲುವು ಕಂಡಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು.ಶೃಂಗೇರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಮುಂದಿನ ದಿನದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಕೊಪ್ಪದಿಂದ ಆಗುಂಬೆ ರಸ್ತೆ, ಹಾಸನ- ಚಿಕ್ಕಮಗಳೂರು - ಬಾಳೆಹೊನ್ನೂರು- ಕೊಪ್ಪ - ಶೃಂಗೇರಿ ಚುರ್ಥುಸ್ಪಥ ರಸ್ತೆ ನಿರ್ಮಾಣ ಮಾಡುವಂತೆ ಸಂಸದ ಕೋಟಾ ಶ್ರೀನಿವಾಸ್‌ರವರ ಬಳಿ ಒತ್ತಾಯಿಸಲಾಗುತ್ತದೆ ಎಂದರು.ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುಂದಿನ ದಿನಗಳಲ್ಲೂ ಮುಂದುವರಿಯುತ್ತದೆ. ಮುಂಬರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಎರಡೂ ಪಕ್ಷಗಳು ಒಂದಾಗಿ ಎದುರಿಸಲಾಗುತ್ತದೆ ಎಂದರು. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಕ್ಷೇತ್ರಾಧ್ಯಕ್ಷ ದಿವಾಕರ್ ಭಟ್ ಇದ್ದರು.