ಬೀದರ್‌ ಜಿಲ್ಲಾ ಯುವ ಜೆಡಿಎಸ್‌ಗೆ ಕಡ್ಯಾಳ್ ನೇಮಕ

| Published : Apr 01 2024, 12:45 AM IST

ಸಾರಾಂಶ

ಜಿಲ್ಲಾ ಜೆಡಿಎಸ್ ಯುವ ವಿಭಾಗದ ಅಧ್ಯಕ್ಷರಾಗಿ ಜಾಫೇಟ್ ರಾಜ್ ಕಡ್ಯಾಳ್ ಅವರನ್ನು ನೇಮಕ ಮಾಡಿದ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಸನ್ಮಾನಿಸಿದರು.

ಕನ್ನಡಪ್ರಭ ವಾರ್ತೆ ಬೀದರ್

ಜಿಲ್ಲಾ ಯುವ ಜನತಾ ದಳ (ಜಾತ್ಯತೀತ) ವಿಭಾಗದ ಅಧ್ಯಕ್ಷರಾಗಿ ಯುವ ಮುಖಂಡ ಜಾಫೇಟ್ ರಾಜ್ ಕಡ್ಯಾಳ್ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ ಪಾಟೀಲ್ ಸೋಲಪುರ ಶಿಫಾರಸ್ಸಿನ ಮೇರೆಗೆ ಈ ನೇಮಕ ಮಾಡಲಾಗಿದೆ.

ಗುರುತರವಾದ ಜವಾಬ್ದಾರಿ ವಹಿಸಿಕೊಂಡು ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷದ ಮುಖಂಡರನ್ನು ಹಾಗೂ ಯುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಯುವ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಬಲವರ್ಧನೆಗೊಳಿಸಬೇಕು ಎಂದು ನೇಮಕಾತಿ ಆದೇಶದಲ್ಲಿ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಜಿಲ್ಲಾ ಜೆಡಿಎಸ್ ಯುವ ವಿಭಾಗದ ಅಧ್ಯಕ್ಷರಾಗಿ ಜಾಫೇಟ್ ರಾಜ್ ಕಡ್ಯಾಳ್ ಅವರನ್ನು ನೇಮಕ ಮಾಡಿದ ಹಿನ್ನೆಲೆ ನಗರದಲ್ಲಿ ಭಾನುವಾರ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ ಸನ್ಮಾನಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ರಮೇಶ ಪಾಟೀಲ್ ಸೋಲಪುರ, ರಾಜು ಕಡ್ಯಾಳ್, ರಾಜಶೇಖರ, ನಬಿ ಖುರೇಷಿ, ಪ್ರಸಾದ ಮನ್ನಳ್ಳಿ, ದಯಾ ಕಡ್ಯಾಳ್, ಸಿ.ಎಂ. ದಾಸ್, ಗೌತಮ ಮಲ್ಲಿಗೆ, ಜೈಸನ್ ಇತರರಿದ್ದರು.