ಸಾರಾಂಶ
ಗೋಕರ್ಣ: ಪುರಾಣ ಪ್ರಸಿದ್ಧ ಮಹಾಬಲೇಶ್ವರ ಮಂದಿರಕ್ಕೆ ಉತ್ತರ ಕನ್ನಡ ಕ್ಷೇತ್ರದ ನೂತನ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗುರುವಾರ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು.ಮಂದಿರದ ಪ್ರಧಾನ ಅರ್ಚಕ ವೇ. ಅಮೃತೇಶ ಹಿರೇ ಪೂಜಾ ಕೈಂಕರ್ಯ ನೆರವೇರಿಸಿದರು. ವೇ. ಬಾಲಕೃಷ್ಣ ಜಂಭೆ, ವೇ. ರಾಮಚಂದ್ರ ಮಾಸ್ಕೇರಿ, ವೇ. ಪ್ರಶಾಂತ ಹಿರೇಗಂಗೆ, ವೇ. ಬಾಲಚಂದ್ರ ಪ್ರಸಾದ, ಗಣಪತಿ ಕಲ್ಲಪ್ಪ, ಮಂದಿರದ ಮೇಲುಸ್ತುವಾರಿ ಸಮಿತಿ ಸದಸ್ಯರಾದ ವೇ. ಪರಮೇಶ್ವರ ಮಾರ್ಕಾಂಡೆ ಸಹಕರಿಸಿದರು.
ಬಳಿಕ ಮಂದಿರದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು. ಇದಕ್ಕೂ ಮೊದಲು ಮಹಾಗಣಪತಿ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇವೆರಡು ದೇವಾಲಯದ ಭೇಟಿ ಬಳಿಕ ತಾಮ್ರಗೌರಿ ಮಂದಿರಕ್ಕೆ ತೆರಳಿ ದೇವಿ ದರ್ಶನ ಪಡೆದರು. ಮಂದಿರ ವತಿಯಿಂದ ಸ್ಮರಣಿಕೆ ನೀಡಿ ಗೌರವಿಲಾಯಿತು.ಈ ವೇಳೆ ಮಂದಿರದ ವ್ಯವಸ್ಥಾಪಕರು, ಸಿಬ್ಬಂದಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಮಾಜಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಪಕ್ಷದ ರಾಜ್ಯ ವ್ಯಾಪಾರ ಪ್ರಕೋಷ್ಟದ ಸದಸ್ಯರಾದ ಗ್ರಾಪಂ ಮಾಜಿ ಅಧ್ಯಕ್ಷ ಮಂಜುನಾಥ ಜನ್ನು, ಪ್ರಮುಖರಾದ ಗಜಾನನ ಗುನಗಾ, ತಾಲೂಕು ಕಾರ್ಯದರ್ಶಿ ವಿನಾಯಕ ನಾಯ್ಕ, ಗಣೇಶ ಪಂಡಿತ್, ಎಂ.ಜಿ. ಭಟ್, ಪಕ್ಷದ ಜಿಲ್ಲಾ ಹಿಂದುಳಿದ ವರ್ಗದ ಖಜಾಂಚಿ ಮಹೇಶ ಶೆಟ್ಟಿ, ಗ್ರಾಪಂ ಅಧ್ಯಕ್ಷೆ ಸುಮನಾ ಗೌಡ, ಹನೇಹಳ್ಳಿ ಗ್ರಾಪಂ ಅಧ್ಯಕ್ಷ ಸಣ್ಣು ಗೌಡ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಶೇಖರ ನಾಯ್ಕ, ಗ್ರಾಪಂ ಸದಸ್ಯರಾದ ರಮೇಶ ಪ್ರಸಾದ, ಸತೀಶ ದೇಶಭಂಡಾರಿ, ಭಾರತೀ ದೇವತೆ, ಪಾರ್ವತಿ ಶೆಟ್ಟಿ, ಶೇಖರ ನಾಯ್ಕ, ಗೋವಿಂದ ಮುಕ್ರಿ, ಗಣಪತಿ ನಾಯ್ಕ, ಸುಜಯ ಶೆಟ್ಟಿ, ಪಕ್ಷದ ಸ್ಥಳೀಯ ಪ್ರಮುಖರಾದ ಜಯರಾಮ ಹೆಗಡೆ, ಈಶ್ವರ ಮೂಡಂಗಿ, ಶಂಕರ ಗೌಡ, ವಿನೋದ ಬೋಮಕರ, ಕುಮಾರ ದೀವಟಗಿ, ಸತೀಶ ಭಟ್, ರಾಜೇಶ ನಾಯಕ, ಶ್ರೀನಿವಾಸ ನಾಯಕ ನಾಡುಮಾಸ್ಕೇರಿ, ಜೆಡಿಎಸ್ ಪ್ರಮುಖರಾದ ಮಹಾಬಲೇಶ್ವರ ಗೌಡ, ಅನಂತ ಗೌಡ ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬಾರದಂತೆ ಕಾಂಗ್ರೆಸ್ ಷಡ್ಯಂತ್ರ: ಕಾಗೇರಿಕಾರವಾರ:
ಅಲ್ಪಸಂಖ್ಯಾತರು ರಾಷ್ಟ್ರೀಯ ಮುಖ್ಯವಾಹಿನಿಗೆ ಬಾರದಂತೆ ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ. ಕಾಂಗ್ರೆಸ್‌ನ ಷಡ್ಯಂತ್ರಕ್ಕೆ ಅಲ್ಪಸಂಖ್ಯಾತರು ಬಲಿಯಾಗುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಅಲ್ಪಸಂಖ್ಯಾತರು ಅವರಿಂದ ಹೊರಬಂದು ರಾಷ್ಟ್ರೀಯ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ದಾಖಲಾದ ಪೋಕ್ಸೊ ಪ್ರಕರಣ ರಾಜಕೀಯ ಪ್ರೇರಿತವಾದುದು. ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಹೆಚ್ಚೇನೂ ಹೇಳಲಾರೆ. ಅವರು ಶೀಘ್ರದಲ್ಲಿ ಇದರಿಂದ ಹೊರಬರಲಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಆಡಳಿತದಿಂದ ಜನರಿಗೆ ಭ್ರಮನಿರಸನವಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ. ಇದರ ಪ್ರತಿಫಲನ ಈ ಲೋಕಸಭೆ ಚುನಾವಣೆಯಲ್ಲಿ ಆಗಿದೆ. ಅಲ್ಪಸಂಖ್ಯಾತರ ಓಲೈಕೆ ಮಾಡಿ, ಬಹುಸಂಖ್ಯಾತರ ಆಶಯಗಳನ್ನು ಗೌರವಿಸದೆ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದೆ ಎಂದು ಆರೋಪಿಸಿದರು.ಎಲ್ಲರ ಸಹಕಾರದಿಂದ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುವುದು. ಕೇಂದ್ರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರಯತ್ನಿಸುತ್ತೇನೆ. ಗೋಕರ್ಣ, ಇಡಗುಂಜಿ, ಬನವಾಸಿ, ಉಳವಿಯಂತಹ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗುವುದು ಎಂದರು.ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಿಲ್ಲ, ಅವರಿಗೆ ಪಕ್ಷದ ತತ್ವ ಸಿದ್ಧಾಂತಗಳು ಒಪ್ಪಿಯಾಗಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಅವರು ಪಕ್ಷಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ. ರಾಜೀನಾಮೆ ನೀಡಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಲಿ, ಜನರ ಮುಂದೆ ಹೋಗಲಿ, ಜನಾಭಿಪ್ರಾಯ ಪಡೆದುಕೊಳ್ಳಲಿ ಎಂದರು.ಪಕ್ಷದ ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ, ಪ್ರಮುಖರಾದ ನಾಗರಾಜ ನಾಯಕ, ಸದಾನಂದ ಭಟ್, ರಾಜೇಂದ್ರ ನಾಯ್ಕ ಮತ್ತಿತರರು ಇದ್ದರು.