ಕೊಡಗಿನಲ್ಲಿ ಇಂದು ಕೈಲ್‌ ಪೊಳ್ದ್ ಸಂಭ್ರಮ

| Published : Sep 03 2025, 01:02 AM IST

ಸಾರಾಂಶ

ಕೊಡಗಿನ ಸಾಂಪ್ರದಾಯಿಕ ಹಬ್ಬ ಕೈಲ್‌ ಪೊಳ್ದ್‌ ಅನ್ನು ಸೆ. 3ರಂದು ಆಚರಿಸಲಾಗುತ್ತದೆ. ಕೃಷಿ ಉಪಕರಣ, ಆಯುಧಗಳಿಗೆ ಪೂಜೆ ಸಲ್ಲಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗಿನ ಸಾಂಪ್ರದಾಯಿಕ ಹಬ್ಬ ಕೈಲ್ ಪೊಳ್ದ್ ಅನ್ನು ಬುಧವಾರ ಸೆ. 3ರಂದು ಆಚರಿಸಲಾಗುತ್ತಿದೆ. ''''''''''''''''ಕೈಲ್'''''''''''''''' ಎಂದರೆ ಆಯುಧ ಮತ್ತು ''''''''''''''''ಪೊಳ್ದ್'''''''''''''''' ಎಂದರೆ ಹಬ್ಬ ಅಥವಾ ಮುಹೂರ್ತ ಎಂದರ್ಥ. ಈ ಹಬ್ಬವು ಕೃಷಿ ಕೆಲಸ ಮುಗಿದ ನಂತರ ಆಚರಿಸಲಾಗುತ್ತದೆ.

ಇದರಲ್ಲಿ ಕೃಷಿ ಉಪಕರಣಗಳು ಮತ್ತು ಆಯುಧಗಳಿಗೆ ಪೂಜೆ ಸಲ್ಲಿಸಲಾಗುತ್ತದೆ.

ಕೈಲ್‌ ಪೊಳ್ದ್ ಹಬ್ಬವು ಕೊಡಗಿನವರ ಲೆಕ್ಕದ ಪ್ರಕಾರ ಚಿನ್ಯಾರ್ ತಿಂಗಳ ಹದಿನೆಂಟನೇ ತಾರೀಕಿನಂದು ಬರುತ್ತದೆ. ಅಂದರೆ ಪ್ರತಿವರ್ಷ ಸೆಪ್ಟಂಬರ್ 3ರಂದು ಆಚರಣೆ ನಡೆಯುತ್ತದೆ. ಕೊಡಗಿನಲ್ಲಿ ಕೈಲ್‌ ಮುಹೂರ್ತ ಹಬ್ಬದ ದಿನದಂದು ಮೇಲ್ನೋಟಕ್ಕೆ ಕಂಡುಬರುವ ಹಬ್ಬದ ದೃಶ್ಯಗಳೆಂದರೆ ಊರ ಮೈದಾನದಲ್ಲಿ ವಿವಿಧ ಕ್ರೀಡಾಕೂಟ ನಡೆಯುತ್ತಿರುತ್ತವೆ.

ಮನೆಗಳಲ್ಲಿ ಹಂದಿಮಾಂಸದ ಸಾರು ಹಾಗೂ ಅಕ್ಕಿ ಕಡಂಬಿಟ್ಟು (ಕಡುಬು)ನ ಅಡುಗೆ ಘಮಘಮಿಸುತ್ತಿರುತ್ತದೆ. ಚಿಕ್ಕವರು ದೊಡ್ಡವರೆನ್ನದೆ ಎಲ್ಲರೂ ಸಾಂಪ್ರದಾಯಿಕವಾಗಿ ಮದ್ಯ ಸೇವಿಸಿ ಖುಷಿ ಪಡುವುದು ಇಲ್ಲಿನ ವಿಶೇಷವಾಗಿದೆ.

ಸಾಂಪ್ರದಾಯಿಕ ಉಡುಪಾದ ಕುಪ್ಪಚೇಲೆಯನ್ನು ಧರಿಸಿ ಹಿರಿಯರನ್ನು ಸೇರಿಸಿ ಅಕ್ಕಿ ಹಾಕಿ ಕುಟುಂಬವನ್ನು ರಕ್ಷಿಸುವಂತೆ ಪ್ರಾರ್ಥಿಸಿಕೊಳ್ಳುತ್ತಾರೆ. ಇದೇ ಸಂದರ್ಭ ಮನೆಯಲ್ಲಿ ಮಾಡಿದ ಭಕ್ಷ್ಯ ಭೋಜನ ಹಾಗೂ ಮದ್ಯವನ್ನು ಗುರುಕಾರಣರಿಗೆ ಇಟ್ಟು ಬೇಡಿಕೊಳ್ಳುತ್ತಾರೆ. ಅಲ್ಲದೆ ದೇವರ ಕೋಣೆಯಲ್ಲಿ ಕಿರಿಯರು ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಾರೆ. ಹಿಂದಿನ ಕಾಲದಲ್ಲಿ ಹಬ್ಬದ ದಿನ ದೇವರ ಕೋಣೆಯಲ್ಲಿಟ್ಟ ಕೋವಿಯನ್ನು ಪೂಜೆಯ ಬಳಿಕ ಹೆಗಲಿಗೇರಿಸಿಕೊಂಡು ಕಾಡಿಗೆ ತೆರಳಿ ಕಾಡು ಪ್ರಾಣಿಗಳನ್ನು ಬೇಟೆಯಾಡಿ ಮಾಂಸದೊಂದಿಗೆ ಮನೆಗೆ ಬರುತ್ತಿದ್ದರು. ಆದುದರಿಂದಲೇ ಇಂದಿಗೂ ಈ ಹಬ್ಬದಲ್ಲಿ ಮಾಂಸಕ್ಕೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡಲಾಗಿದೆ.

ಕೈಲ್‌ಮುಹೂರ್ತ ಹಬ್ಬದ ದಿನದಂದು ಊರ ಮೈದಾನಗಳಲ್ಲಿ ಗ್ರಾಮೀಣ ಕ್ರೀಡಾಕೂಟಗಳನ್ನು ಏರ್ಪಡಿಸಿ ಅಲ್ಲಿ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಪುರುಷರು, ಮಹಿಳೆಯರು ಪಾಲ್ಗೊಂಡು ತಮ್ಮ ಶೌರ್ಯ ಪ್ರದರ್ಶಿಸುತ್ತಾರೆ.

ವಿವಿಧ ಕೊಡವ ಸಮಾಜಗಳು ಕೈಲ್ ಪೊಳ್ದ್ ಸಂತೋಷ ಕೂಟವನ್ನು ಆಯೋಜಿಸುತ್ತದೆ.