ಕೊಡವ ಹಿತರಕ್ಷಣಾ ಬಳಗ ಕ್ ಗ್ಗಟ್ಟ್ ನಾಡ್, ಪೊನ್ನಂಪೇಟೆ ಮತ್ತು ಪೊನ್ನಂಪೇಟೆ ಕೊಡವ ಸಮಾಜ ಆಶ್ರಯದಲ್ಲಿ ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಕೈಲ್ ಪೋಳ್ದ್ ಹಬ್ಬವನ್ನು ಕೃಷಿ ಪರಿಕರಗಳಿಗೆ, ಕೋವಿ, ವಾಹನಗಳಿಗೆ ಪೂಜೆ ಸಲ್ಲಿಸಿ ಆಚರಿಸಲಾಯಿತು.
ಶ್ರೀಮಂಗಲ: ಕೊಡವ ಹಿತರಕ್ಷಣಾ ಬಳಗ ಕ್ ಗ್ಗಟ್ಟ್ ನಾಡ್, ಪೊನ್ನಂಪೇಟೆ ಮತ್ತು ಪೊನ್ನಂಪೇಟೆ ಕೊಡವ ಸಮಾಜ ಆಶ್ರಯದಲ್ಲಿ ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಕೈಲ್ ಪೋಳ್ದ್ ಹಬ್ಬವನ್ನು ಕೃಷಿ ಪರಿಕರಗಳಿಗೆ, ಕೋವಿ, ವಾಹನಗಳಿಗೆ ಪೂಜೆ ಸಲ್ಲಿಸಿ ಆಚರಿಸಲಾಯಿತು.ಕೃಷಿ ಪರಿಕರಗಳಾದ ನೇಗಿಲು, ನೊಗಗಳಿಗೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಮತ್ತು ಕೊಡವ ಹಿತರಕ್ಷಣಾ ಬಳಗದ ಬೊಳ್ಳಿಮಾಡ ಧನು ದೇವಯ್ಯ ಅವರು ಕೊಡವ ಸಾಂಪ್ರದಾಯಿಕ ಉಡುಪು ಕುಪ್ಯ ಚೇಲೆ ಧರಿಸಿ ಪದ್ಧತಿಯಂತೆ ಪೂಜೆ ಸಲ್ಲಿಸಿದರು.
ಕೋವಿ ಕತ್ತಿಗಳಿಗೆ ಆಯುಧ ಪೂಜೆ ಮಾಡಿ ‘ಕಾರೋಣ’ವಿಗೆ ಹಾಗೂ ಬೇಟೆಯಲ್ಲಿ ಜೊತೆ ಸಾಗುವ ‘ಶ್ವಾನ’ಗಳಿಗೆ ಪದ್ಧತಿಯಂತೆ ಪ್ರತ್ಯೇಕವಾಗಿ ಎಡೆ ಇಡಲಾಯಿತು.ವಾಹನಗಳಿಗೆ ಸಾಮೂಹಿಕವಾಗಿ ಹೂವಿನ ಮಾಲೆಯಲ್ಲಿ ಅಲಂಕರಿಸಿ, ಆಯುಧ ಪೂಜೆ ಸಲ್ಲಿಸಿ ದೀಪ ಬೆಳಗಿ ಪೂಜೆಯನ್ನು ಸಲ್ಲಿಸಲಾಯಿತು.ನಂತರ ಕೋವಿಗಳನ್ನು ಹಿರಿಯರಿಂದ ಕಿರಿಯರಿಗೆ ಹಸ್ತಾಂತರಿಸಿ "ಹುಲಿ -ಹಂದಿ ಬರುವ ದಾರಿಯಿಂದ ಸರಿದು ಬೇಟೆಯಾಡು, ಶತ್ರುವನ್ನು ಕೆಣಕಬೇಡ, ಶತ್ರುವಿನೊಂದಿಗೆ ದಾರಿ ಎದುರು ನಿಂತು ಹೋರಾಡು, ಮಿತ್ರನಿಗೆ ಮಿತ್ರನಾಗಿ ಇರು, ದೇವರನ್ನು ಮರೆಯಬೇಡ " ಎಂದು ಕೊಡವ ಭಾಷೆಯಲ್ಲಿ ತಪ್ಪಡ್ಕ ಕಟ್ಟಿ ಕೋವಿ ಹಸ್ತಾಂತರಿಸಲಾಯಿತು. ಪದ್ಧತಿಯಂತೆ ಆಕಾಶಕ್ಕೆ ಗುಂಡು ಹಾರಿಸಲಾಯಿತು.
ವಾಹನಗಳಿಗೆ ಸಾಮೂಹಿಕ ಆಯುಧ ಪೂಜೆ ಸಲ್ಲಿಸಿ, ಪೊನ್ನಂಪೇಟೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಮೆರವಣಿಗೆ, ವಿಶೇಷ ಉಟೋಪಚಾರ ನಡೆಯಿತು.ಕೊಡವ ಹಿತರಕ್ಷಣಾ ಬಳಗದ ಅಧ್ಯಕ್ಷ ಚಿರಿಯಪಂಡ ರಾಜಾ ನಂಜಪ್ಪ, ಉಪಾಧ್ಯಕ್ಷ ಚೆಕ್ಕೇರ ರಮೇಶ್, ಕಾರ್ಯದರ್ಶಿ ಗಾಂಡಂಗಡ ಕೌಶಿಕ್ ದೇವಯ್ಯ, ನಿರ್ದೇಶಕರಾದ ಅಡ್ಡoಡ ಡಾಲಿ ಜನಾರ್ಧನ, ಉಳುವಂಗಡ ಲೋಹಿತ್ ಭೀಮಯ್ಯ, ಕೋಟ್ರಂಗಡ ಬಿಪಿನ್,ಅಜ್ಜಿಕುಟ್ಟಿರ ಶುಭಾ, ಅಜ್ಜಿಕುಟ್ಟಿರ ರಂಜಿ, ಚೇಯಂಡ ಶಮ್ಮಿ, ಅಡ್ಡಂಡ ಸುನಿಲ್ ಸೋಮಯ್ಯ,ಚೆಟ್ಟಂಗಡ ವಸಂತ, ಮಲ್ಲಪನೇರ ಕಾರ್ಯಪ್ಪ, ಚೆಟ್ಟಂಗಡ ಉತ್ತಪ್ಪ, ಗಾಂಡಂಗಡ ಸವಿನ, ಬೊಳ್ಳಿಮಾಡ ಧನು ದೇವಯ್ಯ, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ, ಕಾರ್ಯದರ್ಶಿ ಕೋಟೆರ ಕಿಶನ್ ಉತ್ತಪ್ಪ, ನಿರ್ದೇಶಕ ಕಳ್ಳಿಚಂಡ ಚಿಪ್ಪ ದೇವಯ್ಯ, ಅಡ್ಡಂಡ ಪ್ರಕಾಶ್ ಕುಶಾಲಪ್ಪ, ಪಾರುವಂಗಡ ದಿಲನ್ ಚಂಗಪ್ಪ ಸೇರಿದಂತೆ ಸೇರಿದಂತೆ ಪ್ರಮುಖರು ಹಾಜರಿದ್ದರು.