ಚನ್ನಪಟ್ಟಣ: ಮೇಕೆದಾಟು ಯೋಜನೆಗೆ ಶೀಘ್ರ ಅಡಿಗಲ್ಲು ಹಾಕುವಂತೆ, ಸತ್ತೇಗಾಲ ಯೋಜನೆ ಪೂರ್ಣ, ಕಾಡಾನೆ ಹಾವಳಿ ತಡೆ, ಸರ್ಕಾರದ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪಾದಯಾತ್ರೆ ನಡೆಸಲಾಯಿತು.
ಚನ್ನಪಟ್ಟಣ: ಮೇಕೆದಾಟು ಯೋಜನೆಗೆ ಶೀಘ್ರ ಅಡಿಗಲ್ಲು ಹಾಕುವಂತೆ, ಸತ್ತೇಗಾಲ ಯೋಜನೆ ಪೂರ್ಣ, ಕಾಡಾನೆ ಹಾವಳಿ ತಡೆ, ಸರ್ಕಾರದ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪಾದಯಾತ್ರೆ ನಡೆಸಲಾಯಿತು.
ನಗರದ ಸ್ಪನ್‌ಸಿಲ್ಕ್ ಮಿಲ್‌ನಿಂದ ತಾಲೂಕು ಕಚೇರಿಯವರೆಗೆ ಕಕಜವೇ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾದಯಾತ್ರೆಯಲ್ಲಿ ತೆರಳಿ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.ಈ ವೇಳೆ ಪ್ರತಿಭಟನಾಕಾರನ್ನು ಉದ್ದೇಶಿಸಿ ಮಾತನಾಡಿದ ಕಕಜ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಜೊತೆಗೆ ಮೇಕೆದಾಟು, ಸತ್ತೇಗಾಲ ಯೋಜನೆಗಳನ್ನು ಪೂರ್ಣಗೊಳಿಸಬೇಕು. ವಿವಿಧ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು, ಜತೆಗೆ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಆಗ್ರಹಿಸಿದರು.
ಅಧಿಕಾರಕ್ಕೆ ಬರುವ ಮುನ್ನ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಠಿ ಮಾಡುತ್ತೇವೆಂದು ಭರವಸೆ ನೀಡಿದ ಕೇಂದ್ರ ಮತ್ತು ರಾಜ್ಯ ಜನಪ್ರತಿನಿಧಿಗಳು ಅಧಿಕಾರಕ್ಕೆ ಬಂದ ಬಳಿಕ ಹೊಸ ಉದ್ಯೋಗ ಸೃಷ್ಠಿ ಮಾಡುವುದಿರಲಿ, ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ರಾಜ್ಯದಲ್ಲಿ ೩.೮೦ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ರಾಜ್ಯದಲ್ಲಿನ ಎಲ್ಲಾ ಇಲಾಖೆಗಳಲ್ಲಿನ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಬೇಕು. ಕನಿಷ್ಟ ೫೦ ಸಾವಿರ ರು. ವೇತನ ನಿಗದಿ ಮಾಡಬೇಕು ಎಂದರು.ರೈತ ಮುಖಂಡ ಸೋಸಿ ಪ್ರಕಾಶ ಮಾತನಾಡಿ, ಮೇಕೆದಾಟು ಯೋಜನೆಯಿಂದ ೬ ಜಿಲ್ಲೆಗಳಿಗೆ ಕೃಷಿಗೆ ಮತ್ತು ಕುಡಿಯುವ ನೀರಿನ ಜೊತೆಗೆ ವಿದ್ಯುತ್ ಉತ್ಪಾದನೆಗೆ ಅನುಕೂಲ ಆಗಲಿದೆ. ಸುಪ್ರಿಂಕೋರ್ಟ್ ರಾಜ್ಯದ ಪರ ತೀರ್ಪು ನೀಡಿದ್ದು ಈ ಯೋಜನೆಯನ್ನು ಶೀಘ್ರವೇ ಜಾರಿಗೆ ತಂದು ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಅಡಿಗಲ್ಲು ಹಾಕಬೇಕು ಎಂದರು.
ಪ್ರತಿಭಟನೆಯಲ್ಲಿ ರೈತ ಮುಖಂಡ ರಾಮಲಿಂಗಯ್ಯ, ಜಿಲ್ಲಾಧ್ಯಕ್ಷ ಬೇವೂರು ಯೋಗೇಶ್‌ಗೌಡ, ಮಂಡ್ಯ ಜಿಲ್ಲಾಧ್ಯಕ್ಷ ಉಮಾಶಂಕರ್, ನಿವೃತ್ತ ಪ್ರಾಂಶುಪಾಲ ನಿಂಗೇಗೌಡರು(ಎನ್‌ಜಿ), ಸಾರ್ವಜನಿಕ ವಿದ್ಯಾಸಂಸ್ಥೆಯ ಸಿ.ಸಿ.ಚನ್ನಪ್ಪ, ನಿವೃತ್ತ ಉಪಪ್ರಾಂಶುಪಾಲ ಟಿ.ಆರ್. ರಂಗಸ್ವಾಮಿ, ಚಕ್ಕೆರೆ ಚನ್ನವೀರೇಗೌಡ, ದಸಂಸ ವೆಂಕಟೇಶ್, ಡಾ. ರಾಜ್ ಕಲಾಬಳಗದ ಎಲೇಕೇರಿ ಮಂಜುನಾಥ್ ಇತರರಿದ್ದರು.ಪೊಟೋ೯ಸಿಪಿಟಿ೧: ವಿವಿಧ ಬೇಡಿಕೆ ಈಡೇರಿಸವಂತೆ ಆಗ್ರಹಿಸಿ ಕಕಜವೇ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು.
ಪೊಟೋ೯ಸಿಪಿಟಿ೨:ವಿವಿಧ ಬೇಡಿಕೆ ಈಡೇರಿಸವಂತೆ ಆಗ್ರಹಿಸಿ ಕಕಜವೇ ಕಾರ್ಯಕರ್ತರು ಪಾದಯಾತ್ರೆ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.