ಮೂಗೂರಿನಲ್ಲಿ ಶ್ರೀ ಶನೈಶ್ಚರಸ್ವಾಮಿ ಪಲ್ಲಕ್ಕಿ ಉತ್ಸವ

| Published : Sep 08 2025, 01:00 AM IST

ಸಾರಾಂಶ

ಗ್ರಾಮಸ್ಥರು ಬೆಳಗ್ಗೆಯಿಂದಲೆ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆದರು.

ಕನ್ನಡಪ್ರಭ ವಾರ್ತೆ ಮೂಗೂರುಗ್ರಾಮದಲ್ಲಿ 69ನೇ ವರ್ಷದ ಶ್ರೀ ಶ್ರೀ ಶನೈಶ್ಚರ ಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ ಬಹಳ ವಿಜೃಂಭಣೆಯಿಂದ ನೆಡೆಯಿತು.ಶನಿವಾರ ಬೆಳಗ್ಗೆ 8.30ಕ್ಕೆ ಶ್ರೀ ಶನೈಶ್ಚರ ಸ್ವಾಮಿಯ ಕಾಕವಾಹನೋತ್ಸವ ನೆರವೇರಿತು. 69ನೇ ವಾರ್ಷಿಕೋತ್ಸವ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ತಳಿರು ತೋರಣ ಹಾಗೂ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿತ್ತು.ಗ್ರಾಮಸ್ಥರು ಬೆಳಗ್ಗೆಯಿಂದಲೆ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆದರು. ಸಂಜೆ 6.30ಕ್ಕೆ ಹೂವಿನ ಪಲ್ಲಕ್ಕಿ ಉತ್ಸವವನ್ನು ಹಾಗೂ ವಾದ್ಯವೃಂದವರಿಂದ ಪೂಜಾ ಕುಣಿತ ಊರಿನ ಪ್ರಮುಖ ಬೀದಿಗಳಲ್ಲಿ ನೆರವೇರಿತು.ಮೂಗೂರು ಮತ್ತು ಸುತ್ತಮುತ್ತಲ ಗ್ರಾಮಸ್ಥರು ದೇವರ ದರ್ಶನ ಪಡೆದರು.

ಪಲ್ಲಕ್ಕಿ ಉತ್ಸವ ಮಧ್ಯದ ಬೀದಿ ದೇವಾಲಯ ತಲುಪಿದ ಬಳಿಕ ಗ್ರಾಮಸ್ಥರ ನೇತ್ತೃತ್ವದಲ್ಲಿ ಶ್ರೀ ಶನೇಶ್ವರ ಸ್ವಾಮಿಯವರಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು. ರಾತ್ರಿ ಬದನವಾಳು ಶಿವಕುಮಾರ ಶಾಸ್ತ್ರೀ ಮತ್ತು ತಂಡದವರಿಂದ ರಾಜ ವಿಕ್ರಮ ಅಥವಾ ಶನಿಪ್ರಭಾವ ಎಂಬ ಹರಿಕಥೆ ಏರ್ಪಡಿಸಲಾಗಿತ್ತು. ಬಳಿಕ ದೇವಾಲಯ ಆವರಣದಲ್ಲಿ ಪ್ರಸಾದ ವಿನಿಯೋಗ ನಡೆಯಿತು. ಈ ವೇಳೆ ವ್ಯವಸ್ಥಾಪಕ ಸಮಿತಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಇದ್ದರು.