ಇಲ್ಲಿಗೆ ಸಮೀಪದ ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದ ಅಷ್ಟಬಂಧ ಬ್ರಹ್ಮಕಲಶ ಉತ್ಸವಕ್ಕೆ ವಿಶೇಷ ಪ್ರಾರ್ಥನೆಯೊಂದಿಗೆ ಬುಧವಾರ ಚಾಲನೆ ನೀಡಲಾಯಿತು.

ನಾಪೋಕ್ಲು: ಇಲ್ಲಿಗೆ ಸಮೀಪದ ಕಕ್ಕಬ್ಬೆಯ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದ ಅಷ್ಟಬಂಧ ಬ್ರಹ್ಮಕಲಶ ಉತ್ಸವಕ್ಕೆ ವಿಶೇಷ ಪ್ರಾರ್ಥನೆಯೊಂದಿಗೆ ಬುಧವಾರ ಚಾಲನೆ ನೀಡಲಾಯಿತು. ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಮೇ 13ರಿಂದ 18ರವರೆಗೆ ಜರುಗುವ ಅಷ್ಟಬಂಧ ಬ್ರಹ್ಮಕಲಶ ಅಂಗವಾಗಿ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬುಧವಾರ ಸಂಜೆ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ತಕ್ಕ ಮುಖ್ಯಸ್ಥರು ಹಾಗೂ ಭಕ್ತ ಜನ ಸಂಘದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ ಅವರು ದೇವರ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಧಾರ್ಮಿಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು. ಬಳಿಕ ಧಾರ್ಮಿಕ ಕಾರ್ಯಕ್ರಮಗಳಾದ ಅಂಕುರಾರ್ಪಣೆ, ಪ್ರಾಸಾದ ಶುದ್ದಿ ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಬಲಿ ಜರುಗಿತು. ಇದಕ್ಕೂ ಮೊದಲು ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಯವರನ್ನು ಚೆಂಡೆ ಮೇಳದೊಂದಿಗೆ ಸಾಂಪ್ರದಾಯಿಕವಾಗಿ ಬರಮಾಡಿಳ್ಳಲಾಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ ಹಾಗೂ ಸುಮನ್ ಸುಬ್ರಮಣಿ ಅವರು ಮಾಧ್ಯಮದೊಂದಿಗೆ ಮಾತನಾಡಿ, ಪೂಜಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಭಕ್ತ ಜನ ಸಂಘದ ಕಾರ್ಯದರ್ಶಿ ಬಟ್ಟೀರ ಚೊಂದಮ್ಮ ಮೇದಪ್ಪ, ಖಜಾಂಜಿ ಅಂಜಪರವಂಡ ಕುಶಾಲಪ್ಪ, ಮಾಜಿ ಖಜಾಂಜಿ ನಬುಡುಮಂಡ ಸುಬ್ರಮಣಿ, ನಿರ್ದೇಶಕ ಪರದಂಡ ನರೇಂದ್ರ, ಪರದಂಡ ರಮೇಶ್, ಅನ್ನಡಿಯoಡ ದಿಲೀಪ್ ಕುಮಾರ್, ಮಾಜಿ ಅಧ್ಯಕ್ಷ ಕಾಂಡಂಡ ಜೋಯಪ್ಪ, ಕಣಿಯರ ನಾಣಯ್ಯ, ಪಾರುಪತ್ತೆಗಾರ ಪರದಂಡ ಪ್ರಿನ್ಸ್, ಉದಿಯಂಡ ಸುಭಾಷ್, ಬಟ್ಟಿರ ಮೇದಪ್ಪ, ಕಾಂಡಂಡ ಉಷಾ ಜೋಯಪ್ಪ ಸಹಿತ ಭಕ್ತಾದಿಗಳು ಉಪಸ್ಥಿತರಿದ್ದರು.