ಇಲ್ಲಿಗೆ ಸಮೀಪದ ಕಕ್ಕಬೆ ಪ್ರೌಢಶಾಲಾ ಬಾಲಕರು ಹಾಗೂ ಬಾಲಕಿಯರು ಹಾಕಿ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಕಕ್ಕಬೆ ಪ್ರೌಢಶಾಲಾ ಬಾಲಕರು ಹಾಗೂ ಬಾಲಕಿಯರು ಹಾಕಿ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮಡಿಕೇರಿ ಟರ್ಫ್ ಹಾಕಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಇಲ್ಲಿಯ ಬಾಲಕಿಯರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ಮಡಿಕೇರಿ ಟರ್ಫ್ ಹಾಕಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಬಾಲಕರು ಭಾಗವಹಿಸಿದ್ದು ಇವರು ಕೂಡ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಶಾಲಾ ಮುಖ್ಯ ಶಿಕ್ಷಕ ಡಿ. ಅನಿಲ್ ರಾಜ್, ವ್ಯವಸ್ಥಾಪಕ ಶರತ್ ಕೆ ಎಂ ಅವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೆ. ಡಿ. ಬೋಪಣ್ಣ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.