ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸಮೀಪದ ಕಕ್ಕಬೆ - ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಿತು. ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸಮೀಪದ ಕಕ್ಕಬೆ - ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಿತು.

ಜಾಥಾದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು

ಪಾಲ್ಗೊಂಡಿದ್ದರು.

ಕಕ್ಕಬ್ಬೆಯ ಆಟೋ ಚಾಲಕರು ಆಟೋ ಮೆರವಣಿಗೆ ನಡೆಸಿ ಜಾಗೃತಿ ಜಾಥಾಕ್ಕೆ ಸ್ವಾಗತ ಕೋರಿ ಗಮನ ಸೆಳೆದರು.

ಬಳಿಕ ಕಕ್ಕಬೆ ಕೃಷಿ ಪತ್ತಿನ ಸಹಕಾರ ಸಂಘ ದ ಸಭಾಂಗಣದಲ್ಲಿ ಆಯೋಜಿಸಲಾದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪ ಪಿ.ಎಲ್ ಅಧ್ಯಕ್ಷತೆ ವಹಿಸಿದ್ದರು.

ಉಪಾಧ್ಯಕ್ಷೆ ಬೀನಾ ಸುಚಿತ್ರ , ಪಂಚಾಯತಿ ಸದಸ್ಯರಾದ ಹರೀಶ್ ಮೊಣ್ಣಪ್ಪ, ಕುಂಡಂಡ ರಜಾಕ್ , ಬಷೀರ್, ಇಂದಿರಾ,

ಶೈಲಾ, ಲೀಲಾವತಿ, ಬೋಪಣ್ಣ, ಸಫೀಯಾ, ಕುಡಿಯರ ಮುತ್ತಪ್ಪ, ಗ್ರಾಮ ಅಭಿವೃದ್ಧಿ ಅಧಿಕಾರಿ ಅಶೋಕ್ ಮತ್ತಿತರರು ಇದ್ದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ಛದ್ಮವೇಷ, ಭಾಷಣ, ಪ್ರಬಂಧ, ನೃತ್ಯ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನವನ್ನು ವಿತರಿಸಲಾಯಿತು.

ಸಂವಿಧಾನದ ರಚನೆ, ಆಶಯಗಳ ಕುರಿತು ಶಿಕ್ಷಕಿ ರಜಿನಾ ಮತ್ತು ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ ಮಾತನಾಡಿ ಜಾತದ ಸಮಗ್ರ ಮಾಹಿತಿ ನೀಡಿದರು.

ಪಿಡಿಒ ಆಶೋಕ್ ಸ್ವಾಗತಿಸಿದರು. ಕೆ ಪಿ ಬಾಣೆ ಶಾಲೆಯ ಶಿಕ್ಷಕ ಗಣೇಶ್ ನಿರೂಪಿಸಿದರು.