ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಸ್ಥಗಿತಕ್ಕೆ ಕೋರ್ಟ್‌ ತಡೆ

| N/A | Published : Jul 09 2025, 10:41 AM IST

jan aushadhi kendra 2.jpg

ಸಾರಾಂಶ

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

  ಕಲಬುರಗಿ :  ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ರದ್ದುಗೊಳಿಸಿ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ, ಕಲಬುರಗಿ ಹೈಕೋರ್ಟ್‌ ಪೀಠದಲ್ಲಿ 16 ಅರ್ಜಿಗಳು ಸಲ್ಲಿಕೆಯಾಗಿದ್ದವು. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ಪೀಠ, ಮುಂದಿನ ವಿಚಾರಣೆವರೆಗೂ ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ಮಧ್ಯಂತರ ಆದೇಶ ನೀಡಿದೆ.

ಈ ಕೇಂದ್ರಗಳು ರೋಗಿಗಳಿಗೆ ರಿಯಾಯಿತಿ ದರದಲ್ಲಿ ಔಷಧಗಳನ್ನು ಒದಗಿಸುತ್ತಿವೆ. ಇದರಿಂದ ಬಡ ರೋಗಿಗಳಿಗೆ ತುಂಬಾ ಅನುಕೂಲವಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರ, ಸಾರ್ವಜನಿಕ ಆರೋಗ್ಯ ಸೇವೆಯ ಹಕ್ಕನ್ನು ಉಲ್ಲಂಘಿಸುತ್ತದೆ. ಇವುಗಳನ್ನು ಮುಚ್ಚಿದರೆ ರೋಗಿಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆ ತೆತ್ತು ಔಷಧ ಕೊಂಡುಕೊಳ್ಳಬೇಕಾಗುತ್ತದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು. ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ಈ ಕುರಿತು ಮಧ್ಯಂತರ ಆದೇಶ ನೀಡಿದೆ.

Read more Articles on