ಸಾರಾಂಶ
ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಯಡ್ರಾಮಿ : ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಳ್ಳಿ ಗ್ರಾಮದ ಕೆಂಚಪ್ಪ ತೋಟಪ್ಪ ಪೂಜಾರಿ (16) ಹಾಗೂ ಅದೇ ಶಾಲೆ ಅನ್ಯಕೋಮಿನ ನಾಗರಹಳ್ಳಿ ಗ್ರಾಮದ ನಸೀಮಾ ಆಳಗೂರ (15)ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಸೀಮಾ ಶುಕ್ರವಾರ ರಾತ್ರಿ ಶೌಚಕ್ಕೆಂದು ಮನೆಯಿಂದ ಹೊರಗೆ ಹೋಗಿದ್ದವಳು ಮರಳಿ ಮನೆಗೆ ಬಂದಿರಲಿಲ್ಲ. ಅದೇ ರೀತಿ ಇತ್ತ ತನ್ನ ಅಣ್ಣನ ಬೈಕ್‌ನಲ್ಲಿ ಹೊರಗೆ ಹೋಗಿದ್ದ ಕೆಂಚಪ್ಪ ಮಳ್ಳಿ ಮನೆಗೆ ಹಿಂತಿರುಗಿರಲಿಲ್ಲ. ಇಬ್ಬರೂ ಬೈಕಲ್ಲಿ ಗ್ರಾಮದ ಹೊರವಲಯದ ಐನಾಪುರ ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದ ಜಮೀನಿಗೆ ಹೋಗಿ ಬೇವಿನ ಮರಕ್ಕೆ ಒಂದೇ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಬೆಳಗಿನ ಜಾವ ರೈತನೊಬ್ಬ ತಮ್ಮ ಹೊಲಕ್ಕೆ ಹೋಗುವಾಗ ಮಕ್ಕಳು ನೇಣು ಹಾಕಿಕೊಂಡಿದ್ದನ್ನು ನೋಡಿ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ. ನಸೀಮಾಗೆ ವಿವಾಹ ನಿಶ್ಚಯ ಆಗಿತ್ತು. ಇದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಎರಡೂ ಕುಟುಂಬದವರು ದೂರು ನೀಡಿಲ್ಲ. ಆದರೆ ಯಡ್ರಾಮಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.