ಮೇ 7ಕ್ಕೆ ಕಡ್ಡಾಯವಾಗಿ ಮತದಾನ ಮಾಡಿ: ಜಿಪಂ ಸಿಇಒಮತದಾನ ಪ್ರಮಾಣ ಹೆಚ್ಚಳಕ್ಕೆ ಸಹಕಾರ ನೀಡಿ ಎಂದು ಭಂವರ್ ಸಿಂಗ್ ಮೀನಾ ಕರೆ ನೀಡಿದರು. ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಭಾರತ ಚುನಾವಣೆ ಆಯೋಗ, ಜಿಲ್ಲಾಡಳಿತ, ಜಿಪಂ ಮತ್ತು ಸ್ವೀಪ್ ಸಮಿತಿ ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಯೋಗದೊಂದಿಗೆ ಲೋಕಸಭಾ ಚುನಾವಣೆ ನಿಮಿತ್ತ ಸಸಿಗೆ ನೀರೆರೆಯುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.