ಪಂಡಿತ್ ರಂಗಮಂದಿರದಲ್ಲಿ ಹಲ್ಮಿಡಿ ಶಾಸನ ಪ್ರತಿಕೃತಿ ಅನಾವರಣಮೈಸೂರು ರಾಜ್ಯವನ್ನು 1973ರಲ್ಲಿ ಕರ್ನಾಟಕ ಎಂದು ನಾಮಕರಣಗೊಂಡು ಇದೀಗ 50 ವರ್ಷ ಪೂರ್ಣಗೊಂಡಿದ್ದು, ಕರ್ನಾಟಕ ಸುವರ್ಣ ಸಂಭ್ರಮ-50ರ ಸವಿನೆನಪಿನಲ್ಲಿ ಶುಕ್ರವಾರ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರ ಅವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅನಾವರಣಗೊಳಿಸುವರು.