ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಿಂದ ಪ್ರತಿವರ್ಷ ನೀಡುವ "ಶ್ರೀ ಸಿದ್ಧತೋಟೇಂದ್ರ ಪ್ರಶಸ್ತಿ- 2024 " ಕ್ಕೆ ಇಸ್ರೋದ ಅಧ್ಯಕ್ಷ ಎಸ್. ಸೋಮನಾಥ ಹಾಗೂ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ.ಮೋಹನ್ ಆಳ್ವಾ ಆಯ್ಕೆಯಾಗಿದ್ದಾರೆ.
ಕೇಂದ್ರ ಸರ್ಕಾರದಿಂದ ಐದು ವರ್ಷದಲ್ಲಿ ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಫೆ.7ರಂದು ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ರಾಜ್ಯದ ಜನಹಿತ ಕಾಯುವುದಕ್ಕಾಗಿ ಪ್ರತಿಭಟನೆ ನಡೆಸೋದಾಗಿ ಶಾಸಕ ಬಿ.ಆರ್. ಪಾಟೀಲ ಹೇಳಿದ್ದಾರೆ.