ಶಿಕ್ಷಣದಿಂದ ಲೈಂಗಿಕ ಕಿರುಕುಳ ತಡೆಯಲು ಸಾಧ್ಯ: ಹೇಮಾ ಕುಲಕರ್ಣಿಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಕಾಯ್ದೆ 2013 ಶಿಕ್ಷಣ, ವಿಚಾರಣೆ, ಕೆಲಸದ ಸ್ಥಳವನ್ನು ಸುರಕ್ಷಿತವಾಗಿಸುವ ಮತ್ತು ಮಹಿಳಾ ಸ್ನೇಹಿಯಾಗಿ ಮಾಡುವಲ್ಲಿ ಉದ್ಯೋಗದಾತರ ಜವಾಬ್ದಾರಿ ಕುರಿತು ಮಾರ್ಗಸೂಚಿಗಳನ್ನು ಒದಗಿಸುತ್ತದೆ. ಈ ಕಾಯ್ದೆ ಅಡಿಯಲ್ಲಿ ಉದ್ಯೋಗದಾತರು ಲೈಂಗಿಕ ಕಿರುಕುಳ ತಡೆಯಲು ಅಗತ್ಯ ಮಾಹಿತಿಯನ್ನು ಸಂಸ್ಥೆಯ ಪ್ರಮುಖ ಕೆಲಸದ ಸ್ಥಳಗಳಲ್ಲಿ ಪ್ರದರ್ಶಿಸಬೇಕು.